ವೀಕೆಂಡ್‌ನಲ್ಲಿ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ..ಅಬ್ಬಬ್ಬಾ ಕ್ಯೂ ನೋಡಿ…!
ಹಾಸನಾಂಬೆ ದೇವಿ ದರ್ಶನ ಪಡೆಯಲು ಮೂರನೇ ದಿನವೂ ಭಕ್ತಸಾಗರ ಹರಿದು ಬಂದಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದರು. ನಸುಕಿನ ಜಾವ 4 ಗಂಟೆಯಿಂದಲೇ ಭಕ್ತರು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ.
ಹಾಸನ, (ಅಕ್ಟೋಬರ್ 27): ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಗುರುವಾರ (ಅಕ್ಟೋಬರ್ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಗಿದ್ದು, ಇಂದು ಮೂರನೇ ದಿನ ಭಾನುವಾರವಾಗಿದ್ದರಿಂದ ಹಾಸನಾಂಬ ದೇವಿ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಸಹ ಸಕಲ ವ್ಯವಸ್ಥೆ ಮಾಡಿದೆ.