6,6,6,6,6,6… ಎಲ್ಲವೂ ಸ್ಟೇಡಿಯಂನಿಂದ ಆಚೆ; ಬೇಬಿ ಎಬಿ ಬಿರುಗಾಳಿ ಹೇಗಿತ್ತು? ವಿಡಿಯೋ ನೋಡಿ
Dewald Brevis' Blitz: ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿ ತಮ್ಮದೇ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಅವರು ಸತತ ನಾಲ್ಕು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅರ್ಧಶತಕ ಪೂರ್ಣಗೊಳಿಸಿದರು. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ ಅತಿವೇಗದ ಅರ್ಧಶತಕ ಗಳಿಸಿದ ದಕ್ಷಿಣ ಆಫ್ರಿಕಾ ಆಟಗಾರ ಎನಿಸಿಕೊಂಡಿದ್ದಾರೆ.
ಪ್ರಸ್ತುತ ದಕ್ಷಿಣ ಆಫ್ರಿಕಾ ತಂಡವು ಟಿ20 ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಎರಡೂ ತಂಡಗಳ ನಡುವೆ 3 ಟಿ20 ಪಂದ್ಯಗಳ ಸರಣಿ ನಡೆಯುತ್ತಿದ್ದು ಈಗಾಗಲೇ ಎರಡು ಪಂದ್ಯಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ಎರಡನೇ ಪಂದ್ಯವನ್ನು ಆಫ್ರಿಕಾ ಗೆದ್ದುಕೊಂಡಿತ್ತು. ಇದೀಗ ಸರಣಿಯ ಮೂರನೇ ಪಂದ್ಯ ನಡೆಯುತ್ತಿದ್ದು, ಎರಡನೇ ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್, ಇದೀಗ ಸರಣಿಯ ಕೊನೆಯ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಡೆವಾಲ್ಡ್ 26 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 1 ಬೌಂಡರಿಯೊಂದಿಗೆ 53 ರನ್ ಗಳಿಸಿದರು. ಮೊದಲ ಟಿ20ಯಲ್ಲಿ ಕೇವಲ 2 ರನ್ ಗಳಿಗೆ ಔಟಾಗಿದ್ದ ಬ್ರೆವಿಸ್ ಎರಡನೇ ಪಂದ್ಯದಲ್ಲಿ 56 ಎಸೆತಗಳಲ್ಲಿ 125 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದ್ದರು.
ಈ ಪಂದ್ಯದಲ್ಲಿ ಬ್ರೆವಿಸ್ ಸತತ 4 ಎಸೆತಗಳಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. ಮೊದಲ ಇನ್ನಿಂಗ್ಸ್‌ನ 10 ನೇ ಓವರ್‌ನಲ್ಲಿ ಈ ಅದ್ಭುತ ಸಾಧನೆ ಮಾಡಿದ ಬ್ರೆವಿಸ್, ಆರನ್ ಹಾರ್ಡಿ ಬೌಲ್ ಮಾಡಿದ ಈ ಓವರ್‌ನ ಮೂರನೇ, ನಾಲ್ಕನೇ, ಐದನೇ ಮತ್ತು ಆರನೇ ಎಸೆತಗಳಲ್ಲಿ ಸತತ 4 ಸಿಕ್ಸರ್‌ಗಳನ್ನು ಬಾರಿಸಿದರು. ಹಾರ್ಡಿಯ ಈ ಓವರ್‌ನಲ್ಲಿ ಒಟ್ಟು 27 ರನ್‌ಗಳು ಬಂದವು.
ಈ ಪಂದ್ಯದಲ್ಲಿ, ಬ್ರೆವಿಸ್ ಆಸ್ಟ್ರೇಲಿಯಾ ವಿರುದ್ಧ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿ ತಮ್ಮದೇ ಆದ ದಾಖಲೆಯನ್ನು ಮುರಿದರು. ಇದಕ್ಕೂ ಮೊದಲು, ಕಾಂಗರೂ ತಂಡದ ವಿರುದ್ಧದ ಈ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಬ್ರೆವಿಸ್ 25 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಪರ ಟಿ20 ಸ್ವರೂಪದಲ್ಲಿ ಅತಿವೇಗದ ಅರ್ಧಶತಕ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

