ಕೋಮು ಸಾಮರಸ್ಯ ಕದಡಲು ಪೊಲೀಸ್ ವೈಫಲ್ಯ ಕಾರಣವಾ? ಪೊಲೀಸರು ತಡವಾಗಿ ಎಚ್ಚೆತ್ತರಾ? ಟಿವಿ 9 ಡಿಜಿಟಲ್ ಲೈವ್ನಲ್ಲಿ ಚರ್ಚೆ
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ಕೋಮು ಸಾಮರಸ್ಯವನ್ನು ಹದಗೆಡಿಸುವ ಅನೇಕ ಘಟನೆಗಳು ನಡೆದಿವೆ. ಇಷ್ಟೆಲ್ಲ ನಡೆದ ಮೇಲೆ ಈಗ ಕೋಮು ಸಾಮರಸ್ಯ ಹದಗೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನಿರ್ದೇಶನ ನೀಡಿದ್ದಾರೆ. ಪೊಲೀಸರು ಎಚ್ಚೆತ್ತುಕೊಳ್ಳುವಲ್ಲಿ ತಡ ಆಯ್ತೆ? ಮತ್ತು ಈ ಕೆಲಸ ನಿರ್ವಹಿಸುವಲ್ಲಿ ಅವರು ವಿಫಲರಾದರೆ?
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ಕೋಮು ಸಾಮರಸ್ಯವನ್ನು ಹದಗೆಡಿಸುವ ಅನೇಕ ಘಟನೆಗಳು ನಡೆದಿವೆ. ಇಷ್ಟೆಲ್ಲ ನಡೆದ ಮೇಲೆ ಈಗ ಕೋಮು ಸಾಮರಸ್ಯ ಹದಗೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ (DG IGP Praveen Sood) ನಿರ್ದೇಶನ ನೀಡಿದ್ದಾರೆ. ಪೊಲೀಸರು ಎಚ್ಚೆತ್ತುಕೊಳ್ಳುವಲ್ಲಿ ತಡ ಆಯ್ತೆ? ಮತ್ತು ಈ ಕೆಲಸ ನಿರ್ವಹಿಸುವಲ್ಲಿ ಅವರು ವಿಫಲರಾದರೆ? ಪರಿಸ್ಥಿತಿ ಕೈ ಮೀರಿ ಹೋಗಿದೆಯೇ? ಈ ಕುರಿತು ಇಂದಿನ ಡಿಜಿಟಲ್ ಲೈವ್ನಲ್ಲಿ ಚರ್ಚಿಸೋಣ. ಆ್ಯಂಕರ್ ಚಂದ್ರಮೋಹನ್ ಈ ಚರ್ಚೆ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ರ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ (TV9 Kannada Digital Live).
ಸೋಮವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸೂಚನೆ ಬೆನ್ನಲ್ಲೇ ಅಧಿಕಾರಿಗಳ ಜತೆ ಸಭೆ ನಡೆಸಿದ ಪ್ರವೀಣ್ ಸೂದ್ ಈ ಖಡಕ್ ಸೂಚನೆ ನೀಡಿದ್ದಾರೆ. ಕೋಮು ಆಧರಿತ ಅಪರಾಧ ಕೃತ್ಯ (Criminal Activity) ಗಳನ್ನು ನಿಯಂತ್ರಿಸಿ ಎಂದು ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಸೂಚನೆ ನೀಡಿದ್ದಾರೆ. ಕೋಮು ಗಲಭೆಗೆ ಕಾರಣವಾಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಎಲ್ಲಾ ಐಜಿಪಿ, ಎಸ್‌ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಧರ್ಮ ವಿಚಾರದಲ್ಲಿ ಏನೇ ಸಂಘರ್ಷ ಆದ್ರೂ ನೀವೆ ಹೊಣೆ. ಯಾವುದೇ ಅಹಿತಕರ ಘಟನೆ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ. ಇದರ ಸಮ್ಮುಖದಲ್ಲಿ ಟಿವಿ 9 ಡಿಜಿಟಲ್ ಲೈವ್ನಲ್ಲಿ ಚರ್ಚೆ.
ಇದನ್ನೂ ಓದಿ:
ಈಶ್ವರಪ್ಪ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ, ಡಿಜಿಪಿ ಬದುಕಿದ್ದಾರಾ ಎಂದು ಪ್ರಶ್ನಿಸಿದ ಡಿಕೆಶಿ
ಇದನ್ನೂ ಓದಿ:
ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಮಾಧ್ಯಮಗಳಿಗೆ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಸಂತೋಷ್