ಅಭಿಷೇಕ್ ಅಂಬರೀಷ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸೆಟ್ನಲ್ಲಿ ಡಾಲಿ ಧನಂಜಯ; ಇಲ್ಲಿದೆ ವಿಡಿಯೋ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಚಿತ್ರದ ಸೆಟ್ಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದರು. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದೆ.
‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ (Bad Manners Movie) ಶೂಟಿಂಗ್ ಭರದಿಂದ ಸಾಗುತ್ತಿದೆ. ಅಭಿಷೇಕ್ ಅಂಬರೀಷ್ ಅಭಿನಯದ ಈ ಸಿನಿಮಾಗೆ ದುನಿಯಾ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸದ್ಯ, ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಚಿತ್ರದ ಸೆಟ್ಗೆ ಡಾಲಿ ಧನಂಜಯ (Dhananjay) ಅವರು ಭೇಟಿ ನೀಡಿದ್ದರು. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದೆ. ಭೇಟಿ ವೇಳೆ ಇಬ್ಬರೂ ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಈ ಚಿತ್ರ ಯಾವಾಗ ರಿಲೀಸ್ ಆಗಲಿದೆ ಅನ್ನೋದು ಸದ್ಯದ ಕುತೂಹಲ. ಈ ಚಿತ್ರದಲ್ಲಿ ರಚಿತಾ ರಾಮ್ ನಾಯಕಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಧೀರ್ ಕೆ.ಎಂ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಚರಣ್ ರಾಜ್ ಅವರು (Charan Raj) ಸಂಗೀತ ನೀಡುತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.