ಅಭಿಷೇಕ್​ ಅಂಬರೀಷ್ ನಟನೆಯ ‘ಬ್ಯಾಡ್​ ಮ್ಯಾನರ್ಸ್​​’ ಸೆಟ್​ನಲ್ಲಿ ಡಾಲಿ ಧನಂಜಯ; ಇಲ್ಲಿದೆ ವಿಡಿಯೋ

| Updated By: ರಾಜೇಶ್ ದುಗ್ಗುಮನೆ

Updated on: May 28, 2022 | 2:08 PM

‘ಬ್ಯಾಡ್​ ಮ್ಯಾನರ್ಸ್​​’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಚಿತ್ರದ ಸೆಟ್​​ಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದರು. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದೆ.

‘ಬ್ಯಾಡ್​ ಮ್ಯಾನರ್ಸ್​​’ ಸಿನಿಮಾದ (Bad Manners Movie) ಶೂಟಿಂಗ್ ಭರದಿಂದ ಸಾಗುತ್ತಿದೆ. ಅಭಿಷೇಕ್ ಅಂಬರೀಷ್ ಅಭಿನಯದ ಈ ಸಿನಿಮಾಗೆ ದುನಿಯಾ ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸದ್ಯ, ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಚಿತ್ರದ ಸೆಟ್​​ಗೆ ಡಾಲಿ ಧನಂಜಯ (Dhananjay) ಅವರು ಭೇಟಿ ನೀಡಿದ್ದರು. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದೆ. ಭೇಟಿ ವೇಳೆ ಇಬ್ಬರೂ ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಈ ಚಿತ್ರ ಯಾವಾಗ ರಿಲೀಸ್ ಆಗಲಿದೆ ಅನ್ನೋದು ಸದ್ಯದ ಕುತೂಹಲ. ಈ ಚಿತ್ರದಲ್ಲಿ ರಚಿತಾ ರಾಮ್​ ನಾಯಕಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಧೀರ್ ಕೆ.ಎಂ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಚರಣ್ ರಾಜ್​ ಅವರು (Charan Raj) ಸಂಗೀತ ನೀಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:08 pm, Sat, 28 May 22

Follow us on