ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಪ್ರೀ-ರಿಲೀಸ್​ ಕಾರ್ಯಕ್ರಮ​ ಲೈವ್​ ನೋಡಿ

ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಸಿನಿಮಾ ಡಿಸೆಂಬರ್​ 24ರಂದು ರಿಲೀಸ್​ ಆಗುತ್ತಿದೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ಗೆ ಸಿನಿ ಪ್ರೇಮಿಗಳಿಂದ ಮೆಚ್ಚುಗೆ ಬಂದಿದೆ. ಇಂದು (ಡಿಸೆಂಬರ್​ 19) ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ನಡೆದಿದೆ. ‘

TV9kannada Web Team

| Edited By: Rajesh Duggumane

Dec 19, 2021 | 7:26 PM

ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಸಿನಿಮಾ ಡಿಸೆಂಬರ್​ 24ರಂದು ರಿಲೀಸ್​ ಆಗುತ್ತಿದೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ಗೆ ಸಿನಿ ಪ್ರೇಮಿಗಳಿಂದ ಮೆಚ್ಚುಗೆ ಬಂದಿದೆ. ಇಂದು (ಡಿಸೆಂಬರ್​ 19) ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ನಡೆದಿದೆ. ‘ಡಾಲಿ ಪಿಕ್ಚರ್’ ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಡಾಲಿ ಧನಂಜಯ ಹೀರೋ ಆಗಿ ಕಾಣಿಸಿಕೊಂಡರೆ, ನಾಯಕಿಯಾಗಿ ಅಮೃತ ಅಯ್ಯಂಗಾರ್‌ ಕಾಣಿಸಿಕೊಂಡಿದ್ದಾರೆ.  ಧನಂಜಯ ಈ ಸಿನಿಮಾದಲ್ಲಿ ಆಟೋ ಓಡಿಸೋ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕ ಗೆಳೆಯರಿಗಾಗಿ ಏನು ಮಾಡೋಕೂ ರೆಡಿ ಇರುತ್ತಾನೆ. ಇದು ಆತನನ್ನು ಪ್ರೀತಿಸುವ ಹುಡುಗಿಗೆ ಇಷ್ಟವಿಲ್ಲ. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ಆಗುತ್ತದೆ. ಇನ್ನು, ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂಬುದು ಟ್ರೇಲರ್​​​ನಲ್ಲಿ ಹೈಲೈಟ್​ ಆಗಿದೆ.

ಇದನ್ನೂ ಓದಿ: Dhananjay: ಮಿಡಲ್ ಕ್ಲಾಸ್ ಮಕ್ಕಳಿಗೆ ತಂದೆ- ತಾಯಿನೇ ಹೀರೋ; ‘ಬಡವ ರಾಸ್ಕಲ್’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಧನಂಜಯ್ ಮಾತು

Follow us on

Click on your DTH Provider to Add TV9 Kannada