ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್

Updated on: Oct 21, 2024 | 5:53 PM

ಗಾಯಕ ಹನುಮಂತ ಈಗ ಬಿಗ್ ಬಾಸ್ ಸ್ಪರ್ಧಿ. ಆತನ ಮುಗ್ಧತೆ ಕಂಡು ಧನರಾಜ್ ಸಹಾಯಕ್ಕೆ ಬಂದಿದ್ದಾರೆ. ವೆಸ್ಟರ್ನ್ ಟಾಯ್ಲೆಟ್ ಬಳಸುವುದು ಹೇಗೆ ಎಂದು ಹನುಮಂತನಿಗೆ ಧನರಾಜ್ ಹೇಳಿಕೊಟ್ಟಿದ್ದಾರೆ. ಈ ಟಾಯ್ಲೆಟ್​ ಪಾಠ ಮಧ್ಯರಾತ್ರಿಯಲ್ಲಿ ನಡೆದಿದೆ. ಅದರ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ.

ವೆಸ್ಟರ್ನ್ ಟಾಯ್ಲೆಟ್ ಹೇಗೆ ಬಳಸಬೇಕು? ಹೇಗೆ ಫ್ಲಶ್ ಮಾಡಬೇಕು ಎಂಬುದು ಹನುಮಂತನಿಗೆ ತಿಳಿದಿಲ್ಲ. ಹಾಗಾಗಿ ಅವರಿಗೆ ಧನರಾಜ್ ಪಾಠ ಮಾಡಿದ್ದಾರೆ. ಮಧ್ಯರಾತ್ರಿ ಎಲ್ಲರೂ ಮಲಗಿದ ನಂತರ ಈ ಪ್ರಸಂಗ ನಡೆದಿದೆ. ಅದರ ಪ್ರೋಮೋ ನೋಡಿದ ವೀಕ್ಷಕರು ನಕ್ಕು ನಕ್ಕು ಸುಸ್ತಾಗಿದ್ದಾರೆ. ವೈಲ್ಡ್ ಕಾರ್ಡ್​ ಎಂಟ್ರಿ ಮೂಲಕ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಹನುಮಂತ ಸ್ಪರ್ಧಿಸುತ್ತಿದ್ದಾರೆ. ಅವರು ಹಂಗಾಮಿ ಕ್ಯಾಪ್ಟನ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More