ಆತುರದಲ್ಲಿ ಚಿಕನ್ ತಿಂದ ಧನರಾಜ್ ಆಚಾರ್; ಹೇಗಿದೆ ನೋಡಿ ಒದ್ದಾಟ

Updated on: Dec 24, 2024 | 9:38 PM

ಬಿಗ್ ಬಾಸ್​ ಮನೆಯಲ್ಲಿ ಧನರಾಜ್ ಅವರು ಚಿಕನ್ ಸೇವಿಸಿದ್ದಾರೆ. ಅದು ಗೊತ್ತಾದ ಬಳಿಕ ಅವರು ಆತಂಕ ಮಾಡಿಕೊಂಡಿದ್ದಾರೆ. ತಾವು ತಿನ್ನುತ್ತಿರುವುದು ಚಿಕನ್ ಎಂಬುದು ಧನರಾಜ್ ಅವರಿಗೆ ತಿಳಿದಿರಲಿಲ್ಲ. ‘ಅದು ಚಿಕನ್’ ಎಂದು ಭವ್ಯಾ ಗೌಡ ಅವರು ಖಚಿತಪಡಿಸಿದರು. ಅದು ತಿಳಿದ ಬಳಿಕ ಧನರಾಜ್ ಅವರ ಟೆನ್ಷನ್ ಜಾಸ್ತಿ ಆಯಿತು. ಪ್ರೋಮೋ ಇಲ್ಲಿದೆ ನೋಡಿ..

ಧನರಾಜ್ ಅವರು ಗೊತ್ತಿಲ್ಲದೇ ಚಿಕನ್ ತಿಂದಿದ್ದಾರೆ. ರೆಸಾರ್ಟ್​ ಟಾಸ್ಕ್​ ನಿಭಾಯಿಸುವಾಗ ಆತುರದಲ್ಲಿ ಅವರು ಈ ಅವಾಂತರ ಮಾಡಿಕೊಂಡಿದ್ದಾರೆ. ತಾವು ತಿಂದಿದ್ದು ಚಿಕನ್ ಎಂಬುದು ಗೊತ್ತಾದ ಬಳಿಕ ಕೂಡಲೇ ಹೋಗಿ ಬಾಯಿ ತೊಳೆದುಕೊಂಡಿದ್ದಾರೆ. ಬಿಗ್​ ಬಾಸ್ ಮನೆಯೊಳಗೆ ಧನರಾಜ್ ಅವರ ಗಲಿಬಿಲಿ ಕಂಡು ಭವ್ಯಾ ಗೌಡ, ರಜತ್, ಮೋಕ್ಷಿತಾ ಮುಂತಾದವರು ಬಿದ್ದು ಬಿದ್ದು ನಕ್ಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More