ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರಿಸಿದ ದೋಸ್ತ

Edited By:

Updated on: Jan 20, 2025 | 4:35 PM

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಿಂದ ಧನರಾಜ್ ಅವರು ಹೊರಗೆ ಬಂದಿದ್ದಾರೆ. ಫಿನಾಲೆಗೆ ಹೋಗಬೇಕು ಎಂಬ ಅವರ ಕನಸು ಭಗ್ನವಾಯಿತು. ಇಷ್ಟು ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದಿದ್ದಕ್ಕೆ ಎಷ್ಟು ಸಂಭಾವನೆ ಸಿಕ್ಕಿದೆ ಎಂದು ಪ್ರಶ್ನೆ ಕೇಳಿದ್ದಕ್ಕೆ ಧನರಾಜ್ ಅವರು ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿದ್ದಾರೆ.

ನೂರಾರು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಕಠಿಣ ಪೈಪೋಟಿ ನೀಡಿದ ಧನರಾಜ್ ಅವರು ಎಲಿಮಿನೇಟ್ ಆಗಿದ್ದಾರೆ. ಅವರಿಗೆ ಎಷ್ಟು ಸಂಭಾವನೆ ಸಿಕ್ಕಿರಬಹುದು ಎಂಬ ಪ್ರಶ್ನೆ ಅಭಿಮಾನಿಗಳಿಗೆ ಇದೆ. ‘ಬಿಗ್ ಬಾಸ್ ಒಂದು ದೊಡ್ಡ ಅವಕಾಶ. ಜಾಸ್ತಿ ಸಂಭಾವನೆ ಏನಿಲ್ಲ. ಚಿಕ್ಕ ಹಣವನ್ನು ಕೇಳಿದ್ದೇನೆ. ಅದನ್ನು ಅವರು ಕೊಟ್ಟಿದ್ದಾರೆ. ಹಣಕ್ಕಿಂತಲೂ ಹೆಚ್ಚಾಗಿ ಅವಕಾಶಕವೇ ದೊಡ್ಡವು. ಅದಕ್ಕಾಗಿ ನಾವು ಬಿಗ್ ಬಾಸ್​ಗೆ ಯಾವಾಗಾಲೂ ಕೃತಜ್ಞರಾಗಿ ಇರುತ್ತೇವೆ’ ಎಂದು ಧನರಾಜ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More