ಧುಮ್ಮಿಕ್ಕಿ ಹರಿಯುತ್ತಿದೆ ಧನುಷ್ಕೋಟಿ ಜಲಪಾತ: ವಿಡಿಯೋ ನೋಡಿ
ಮುಂಗಾರು ಮಳೆ ಕಳೆದೊಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿದೆ. ಪರಿಣಾಮವಾಗಿ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಧನುಷ್ಕೋಟಿ ಜಲಪಾತ ಧುಮ್ಮಿಕ್ಕುತ್ತಿದೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚಳವಾಗಿದೆ. ಧುಮ್ಮಿಕ್ಕಿ ಹರಿಯುವ ಜಲಪಾತದ ದೃಶ್ಯ ಇಲ್ಲಿದೆ ನೋಡಿ.
ಮೈಸೂರು, ಮೇ 30: ಕೊಡಗು ಜಿಲ್ಲೆಯಲ್ಲಿ ವಾರದಿಂದ ಭಾರಿ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಧನುಷ್ಕೋಟಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ರಾಜ್ಯದ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಧನುಷ್ಕೋಟಿ ಜಲಪಾತದಲ್ಲಿ 27 ಮೀಟರ್ ಎತ್ತರದಿಂದ ಕಾವೇರಿ ನದಿ ನೀರು ಧುಮ್ಮಿಕ್ಕಿ ಹರಿಯುತ್ತಿದೆ. ಜಲಪಾತದ ನಯನಮನೋಹರ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ.
Latest Videos
