ಹಣದ ವಿಚಾರಕ್ಕೆ ಕಿರಿಕ್: ಧನ್ವೀರ್ ಮಾತನಾಡಿದ ಇನ್ನೊಂದು ಆಡಿಯೋ ವೈರಲ್
ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವೆ ಯಾವ ಕಾರಣಕ್ಕಾಗಿ ಮನಸ್ತಾಪ ಆಗಿದೆ ಎಂಬುದು ಆರಂಭದಲ್ಲಿ ಸ್ಪಷ್ಟವಾಗಿರಲಿಲ್ಲ. ಹಣದ ವಿಚಾರಕ್ಕಾಗಿ ಕಿರಿಕ್ ಆಗಿಲ್ಲ ಎಂದು ಹೇಳಲಾಗಿತ್ತು. ಆದರೆ ಈಗ ಒಂದು ಆಡಿಯೋ ವೈರಲ್ ಆಗಿದೆ. ಅದರಲ್ಲಿ ಧನ್ವೀರ್ ಅವರೇ ಹಣದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.
ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವೆ ಯಾವ ಕಾರಣಕ್ಕಾಗಿ ಮನಸ್ತಾಪ ಆಗಿದೆ ಎಂಬುದು ಆರಂಭದಲ್ಲಿ ಸ್ಪಷ್ಟವಾಗಿರಲಿಲ್ಲ. ಹಣದ ವಿಚಾರಕ್ಕಾಗಿ ಕಿರಿಕ್ ಆಗಿಲ್ಲ ಎಂದು ಹೇಳಲಾಗಿತ್ತು. ಆದರೆ ಈಗ ಒಂದು ಆಡಿಯೋ ವೈರಲ್ ಆಗಿದೆ. ಅದರಲ್ಲಿ ಧನ್ವೀರ್ ಅವರೇ ಹಣದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ವೈರಲ್ ಆಡಿಯೋದಲ್ಲಿ ಪ್ರಸ್ತಾಪ ಆಗಿರುವುದನ್ನು ಗಮನಿಸಿದರೆ ಮನಸ್ತಾಪಕ್ಕೆ ಹಣದ ವಿಷಯವೇ ಕಾರಣ ಎಂಬುದು ಸ್ಪಷ್ಟವಾಗಿದೆ. ‘ಅವರು ಫೋನ್ ಮಾಡಿ ದುಡ್ಡು ಕೇಳಿದರೆ ಬಾಗಿಲಿಗೆ ಎಸೆದು ಬರುತ್ತೇನೆ. ಆಯಮ್ಮನ ಬಳಿ ನನ್ನ ನಂಬರ್ ಇದೆ. ಫೋನ್ ಮಾಡಿ ಕೇಳಬಹುದಲ್ಲ. ನಾನು ಯಾರ ಮನೆಯ ಜೀತದ ಆಳು ಅಲ್ಲ. ನಾನು ದುಡ್ಡು ಕೊಡಲ್ಲ ಅಂತ ಹೇಳಿಯೇ ಇಲ್ಲ’ ಎಂದು ಧನ್ವೀರ್ ಅವರು ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಇಂಥ ಹಲವು ಆಡಿಯೋ ಕ್ಲಿಪ್ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆ ಮೂಲಕ ವಿವಾದ ಇನ್ನಷ್ಟು ಹೆಚ್ಚಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
