ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
‘ರಾಮಾಚಾರಿ’ ಸೀರಿಯಲ್ ತಂಡದವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಬಂದಿದ್ದಾರೆ. ಅವರ ಎದುರು ದೊಡ್ಮನೆಯ ಸದಸ್ಯರು ಡ್ಯಾನ್ಸ್ ಮಾಡಿದ್ದಾರೆ. ‘ವಿಕ್ರಾಂತ್ ರೋಣ’ ಸಿನಿಮಾದ ‘ರಾ ರಾ ರಕ್ಕಮ್ಮ..’ ಹಾಡಿಗೆ ಧರ್ಮ ಕೀರ್ತಿರಾಜ್ ಮತ್ತು ಐಶ್ವರ್ಯಾ ಸಿಂಧೋಗಿ ಅವರು ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ.
‘ಬಿಗ್ ಬಾಸ್’ ಕಾರ್ಯಕ್ರಮ ಎಂದರೆ ಬರೀ ವಿವಾದ ಮಾತ್ರವಲ್ಲ. ಅಲ್ಲಿ, ಮಸ್ತ್ ಮನರಂಜನೆ ಕೂಡ ಇರುತ್ತದೆ. ನವೆಂಬರ್ 14ರ ಸಂಚಿಕೆಯಲ್ಲಿ ಧರ್ಮ ಕೀರ್ತಿರಾಜ್ ಮತ್ತು ಐಶ್ವರ್ಯಾ ಅವರು ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಂದು ಡ್ಯಾನ್ಸ್ ವೇದಿಕೆಯಾಗಿ ಬದಲಾಗಿದೆ. ‘ರಾಮಾಚಾರಿ’ ಧಾರಾವಾಹಿಯ ಪಾತ್ರಧಾರಿಗಳನ್ನು ಇಂಪ್ರೆಸ್ ಮಾಡಲು ಬಿಗ್ ಬಾಸ್ ಮಂದಿ ಇಷ್ಟೆಲ್ಲ ಕಷ್ಟಪಟ್ಟಿದ್ದಾರೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos