ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ

Updated on: Nov 14, 2024 | 7:22 PM

‘ರಾಮಾಚಾರಿ’ ಸೀರಿಯಲ್​ ತಂಡದವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಬಂದಿದ್ದಾರೆ. ಅವರ ಎದುರು ದೊಡ್ಮನೆಯ ಸದಸ್ಯರು ಡ್ಯಾನ್ಸ್ ಮಾಡಿದ್ದಾರೆ. ‘ವಿಕ್ರಾಂತ್ ರೋಣ’ ಸಿನಿಮಾದ ‘ರಾ ರಾ ರಕ್ಕಮ್ಮ..’ ಹಾಡಿಗೆ ಧರ್ಮ ಕೀರ್ತಿರಾಜ್ ಮತ್ತು ಐಶ್ವರ್ಯಾ ಸಿಂಧೋಗಿ ಅವರು ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ.

‘ಬಿಗ್ ಬಾಸ್’ ಕಾರ್ಯಕ್ರಮ ಎಂದರೆ ಬರೀ ವಿವಾದ ಮಾತ್ರವಲ್ಲ. ಅಲ್ಲಿ, ಮಸ್ತ್ ಮನರಂಜನೆ ಕೂಡ ಇರುತ್ತದೆ. ನವೆಂಬರ್ 14ರ ಸಂಚಿಕೆಯಲ್ಲಿ ಧರ್ಮ ಕೀರ್ತಿರಾಜ್ ಮತ್ತು ಐಶ್ವರ್ಯಾ ಅವರು ಮಸ್ತ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ಬಿಗ್ ಬಾಸ್​ ಮನೆ ಒಂದು ಡ್ಯಾನ್ಸ್ ವೇದಿಕೆಯಾಗಿ ಬದಲಾಗಿದೆ. ‘ರಾಮಾಚಾರಿ’ ಧಾರಾವಾಹಿಯ ಪಾತ್ರಧಾರಿಗಳನ್ನು ಇಂಪ್ರೆಸ್ ಮಾಡಲು ಬಿಗ್ ಬಾಸ್ ಮಂದಿ ಇಷ್ಟೆಲ್ಲ ಕಷ್ಟಪಟ್ಟಿದ್ದಾರೆ. ಈ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More