ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ
ಬುಧವಾರದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಗೌಡರ ಮನೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿದರು. ಇಬ್ಬರು ಗಣ್ಯರ ನಡುವೆ ಸ್ವಲ್ಪ ಹೊತ್ತಿನವರೆಗೆ ಮಾತುಕತೆ ನಡೆಯಿತು.
ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಬಿ ಎಸ್ ಯಡಿಯೂರಪ್ಪನವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆಡಿ(ಎಸ್) ಪಿತಾಮಹರ ಮನೆಗೆ ಭೇಟಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ಬುಧವಾರದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು (Dr Veerendra Heggade) ಗೌಡರ ಮನೆಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿದರು. ಇಬ್ಬರು ಗಣ್ಯರ ನಡುವೆ ಸ್ವಲ್ಪ ಹೊತ್ತಿನವರೆಗೆ ಮಾತುಕತೆ ನಡೆಯಿತು.
Latest Videos