AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್, ಬೇಸಿಗೆ ರಜೆ ಎಫೆಕ್ಟ್​​: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಸಾಗರ

ವೀಕೆಂಡ್, ಬೇಸಿಗೆ ರಜೆ ಎಫೆಕ್ಟ್​​: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಸಾಗರ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 24, 2026 | 12:27 PM

Share

ವೀಕೆಂಡ್ ಹಾಗೂ ಬೇಸಿಗೆ ರಜೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳಿಗೆ ಭಕ್ತಸಾಗರವೇ ಹರಿದುಬಂದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಹಾಗೂ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಮಾರ್ಗಗಳಲ್ಲಿ ವಾಹನಗಳ ದಟ್ಟಣೆ ಕಂಡುಬಂದಿದ್ದು, ದೇವರ ದರ್ಶನ ಹಾಗೂ ಸೇವೆಗಳಿಗಾಗಿ ಭಕ್ತರು ಮುಗಿಬಿದ್ದಿದ್ದಾರೆ.

ಮಂಗಳೂರು, ಮೇ 24: ವೀಕೆಂಡ್ ಹಾಗೂ ಬೇಸಿಗೆ ರಜೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಶ್ರೀ ಮಂಜುನಾಥ ಸ್ವಾಮಿಯ ನೆಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನಕ್ಕೆ ಮತ್ತು ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಕುಟುಂಬ ಸಮೇತ ಆಗಮಿಸಿದ ಭಕ್ತರಿಂದ ದೇವಾಲಯಗಳ ಆವರಣದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜಂಗುಳಿ ನಿರ್ಮಾಣವಾಗಿದೆ. ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ವಿವಿಧ ಪೂಜಾ ಸೇವೆಗಳನ್ನು ಪಡೆಯಲು ಭಕ್ತರು ಮುಗಿಬಿದ್ದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲೂ ಇದೇ ರೀತಿಯ ಜನಸಂದಣಿ ಕಂಡುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us