ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ

Updated By: Ganapathi Sharma

Updated on: Aug 11, 2025 | 11:59 AM

38 ವರ್ಷಗಳ ಹಿಂದೆ ಪದ್ಮಲತಾ ಎಂಬುವವರ ಅಸಹಜ ಸಾವಿನ ಪ್ರಕರಣ ಮರು ತನಿಖೆಗೆ ಒತ್ತಾಯಿಸಲಾಗಿದೆ. ಪದ್ಮಲತಾರ ಸಹೋದರಿ ಎಸ್ಐಟಿ ಕಚೇರಿಗೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಮತಾಂತರ ಮಾಫಿಯಾ ಮತ್ತು ನಗರ ನಕ್ಸಲರ ಕೈವಾಡವಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆರೋಪಿಸಿದ್ದು, ಸದನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು, ಆಗಸ್ಟ್ 11: ಕೋಟ್ಯಂತರ ಜನರ ಶ್ರದ್ಧೆ, ಭಕ್ತಿಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಬಿಜೆಪಿ ಎಂಎಲ್​ಸಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ ಎಂದು ಆರೋಪಿಸಿದ ಅವರು, ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ ಎಂದರು.

ಆ ಯೂಟ್ಯೂಬರ್ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಆತ ನ್ಯಾಯಾಲಯಕ್ಕೆ ದಾಖಲೆ ಕೊಡುವುದಿಲ್ಲ. ಆದರೆ ಯೂಟ್ಯೂಬ್​​ನಲ್ಲಿ ಬೇಕಾದ ಹಾಗೆ ಮಾತಾಡಬಹುದಾ? ಇಷ್ಟಕ್ಕೂ ಆ ಭೀಮ ಯಾರು, ಮಂಪರು ಪರೀಕ್ಷೆ ಮಾಡಿದ್ದೀರಾ? ಆತ ತೋರಿಸಿದ 17 ಸ್ಥಳದಲ್ಲಿ 16 ಸ್ಥಳದಲ್ಲಿ ಏನೂ ಸಿಕ್ಕಿಲ್ಲ. ಸತ್ಯಾಸತ್ಯತೆ ಮನವರಿಕೆಯಾಗದೆ ತನಿಖೆ ಮಾಡುತ್ತಿದ್ದಾರೆ. ಇದರ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರಿದ್ದಾರೆ. ಶ್ರದ್ಧೆಗೆ ಧಕ್ಕೆಯಾದರೆ ಮತಾಂತರದ ಬೆಳೆ ತೆಗೆಯಬಹುದು. ಅದಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ