ಮಾಸ್ಕ್‌ಮ್ಯಾನ್ ಬಂಧನ: ಕೆಲ ಹೊತ್ತಲ್ಲೇ ಕೋರ್ಟ್ಗೆ ಹಾಜರು ಸಾಧ್ಯತೆ
ಧರ್ಮಸ್ಥಳದ ಶವಹೂತಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅನಾಮಿಕ ಮಾಸ್ಕ್‌ಮ್ಯಾನ್‌ನನ್ನು ಎಸ್ಐಟಿ ಅಧಿಕಾರಿಗಳು ಇಂದು ಬಂಧಿಸಿದೆ. ನಿನ್ನೆ 19 ಗಂಟೆಗಳ ವಿಚಾರಣೆಯ ಬಳಿಕ ಆತನ ಬಂಧನವಾಗಿದೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಮಂಗಳೂರು, ಆಗಸ್ಟ್ 23: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್‌ಮ್ಯಾನ್‌ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ ಮಾಡಲಾಗಿತ್ತು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 23, 2025 11:21 AM
