ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಮಾಸ್ಕ್ಮ್ಯಾನ್ ಚಿನ್ನಯ್ಯ ಮೊಬೈಲ್ ಪತ್ತೆ
ಧರ್ಮಸ್ಥಳಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯ, ತನ್ನ ಬಳಿ ಮೊಬೈಲೇ ಇಲ್ಲ ಎಂದು ಎಸ್ಐಟಿ ಅಧಿಕಾರಿಗಳ ಬಳಿ ಹೇಳಿದ್ದ. ಅಲ್ಲದೆ, ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿರುವುದಾಗಿ ತಿಳಿಸಿದ್ದ. ಅದರಂತೆ, ತಿಮರೋಡಿ ನಿವಾಸದಲ್ಲಿ ಶೋಧ ನಡೆಸಿದ ಎಸ್ಐಟಿ ಅಧಿಕಾರಿಗಳಿಗೆ ಚಿನ್ನಯ್ಯನ ಮೊಬೈಲ್ ಸಿಕ್ಕಿದೆ.
ಮಂಗಳೂರು, ಆಗಸ್ಟ್ 26: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ, ಶವ ಹೂತಿದ್ದ ಬಗ್ಗೆ ದೂರು ನೀಡಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರನ ಮನೆಗೆ ತೆರಳಿ ಶೋಧ ಕಾರ್ಯ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ತಿಮರೋಡಿ ನಿವಾಸದಲ್ಲಿ ಶೋಧ ನಡೆಸಿದಾಗ ಚಿನ್ನಯ್ಯನ ಮೊಬೈಲ್ ತಿಮರೋಡಿ ಮನೆಯಲ್ಲಿ ಪತ್ತೆಯಾಗಿದೆ.