ಧರ್ಮಸ್ಥಳ ಪ್ರಕರಣ: ಅನಾಮಿಕ ಮುಸುಕುಧಾರಿಯ ಅಸಲಿ ಮುಖ, ಫೋಟೊ ಬಹಿರಂಗ!
ಧರ್ಮಸ್ಥಳ ಪ್ರಕರಣದ ಕೇಂದ್ರಬಿಂದುವಾಗಿರುವ ಅನಾಮಿಕ ಮಾಸ್ಕ್ಮ್ಯಾನ್ನ ನಿಜ ಮುಖ, ಹೆಸರು ಅನಾವರಣವಾಗಿದೆ. ಸದ್ಯ ಆತನನ್ನು ಎಸ್ಐಟಿ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದೆ. ಅನಾಮಿಕನ ಹೆಸರು ಬಹಿರಂಗವಾಗಿದ್ದು, ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂಬುದು ಗೊತ್ತಾಗಿದೆ. ಆತನ ಫೋಟೊ ಕೂಡ ರಿವೀಲ್ ಆಗಿದ್ದು, ಇಲ್ಲಿದೆ ವಿಡಿಯೋ.
ಮಂಗಳೂರು, ಆಗಸ್ಟ್ 23: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ. ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ನನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ. ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ. ಸದ್ಯ ಆತ ಎಸ್ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
Published on: Aug 23, 2025 12:21 PM
Latest Videos
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

