ಧರ್ಮಸ್ಥಳ ಪ್ರಕರಣ: ಅನಾಮಿಕ ಮುಸುಕುಧಾರಿಯ ಅಸಲಿ ಮುಖ, ಫೋಟೊ ಬಹಿರಂಗ!

Updated on: Aug 23, 2025 | 12:23 PM

ಧರ್ಮಸ್ಥಳ ಪ್ರಕರಣದ ಕೇಂದ್ರಬಿಂದುವಾಗಿರುವ ಅನಾಮಿಕ ಮಾಸ್ಕ್​ಮ್ಯಾನ್​​ನ ನಿಜ ಮುಖ, ಹೆಸರು ಅನಾವರಣವಾಗಿದೆ. ಸದ್ಯ ಆತನನ್ನು ಎಸ್​ಐಟಿ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದೆ. ಅನಾಮಿಕನ ಹೆಸರು ಬಹಿರಂಗವಾಗಿದ್ದು, ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂಬುದು ಗೊತ್ತಾಗಿದೆ. ಆತನ ಫೋಟೊ ಕೂಡ ರಿವೀಲ್ ಆಗಿದ್ದು, ಇಲ್ಲಿದೆ ವಿಡಿಯೋ.

ಮಂಗಳೂರು, ಆಗಸ್ಟ್ 23: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ. ಎಸ್​ಐಟಿ ಅಧಿಕಾರಿಗಳು ಮಾಸ್ಕ್​​​ಮ್ಯಾನ್​​ನನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ. ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ. ಸದ್ಯ ಆತ ಎಸ್​​ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 23, 2025 12:21 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More