ಮಾಸ್ಕ್ಮ್ಯಾನ್ ಬಂಧನ: ಎಲ್ಲ ಆರೋಪಗಳಿಂದ ತೊಳೆದಂತಾಗಿದೆ ಈಗ ಎಂದ ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮುಸುಕುಧಾರಿ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದು, ಸತ್ಯ ಹೊರಬರುತ್ತಿದೆ. ಇದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದು ಹೇಳಿದರು.
ಮಂಗಳೂರು, ಆಗಸ್ಟ್ 23: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾತನಾಡಿದ್ದಾರೆ. “ಒಂದೊಂದೇ ಸತ್ಯ ಸಂಗತಿ ಹೊರಬರುತ್ತಿವೆ. “ಇದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಈಗ ಎಲ್ಲ ಆರೋಪಗಳಿಂದ ತೊಳೆದಂತಾಗಿದೆ”. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ ಎಂದು ಹೇಳಿದರು.
Published on: Aug 23, 2025 04:30 PM

