ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

Edited By:

Updated on: Jun 16, 2026 | 5:17 PM

ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್‌ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು,(ಜೂನ್,16): ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case )ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ದಕ್ಷಿಣ ಕನ್ನಡ ( ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ (Charmadi Ghat) ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಎಸ್ ಪಿ ಸೈಮನ್ ಅವರು ನಡೆಸುತ್ತಿದ್ದು, ಇದೇ ಪ್ರಕರಣ ಸಂಬಂಧ ಚರ್ಚಿಸಲು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಖಾರಿಯಾಗಿರುವ ಜೀತೇಂದ್ರ ಕುಮಾರ್ ದಯಾಮ ಅವರನ್ನ ಭೇಟಿಯಾಗಿ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್‌ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,  ಅದೃಷ್ಟವಾಶತ್ ಸದ್ಯ ಅಪಾಯದಿಂದ ಪಾರಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More