ಮಂಗಳೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ
ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಮುಸ್ಲಿಂ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ ನೇತೃತ್ವದ ತಂಡ ಬೆಂಗಳೂರಿನಿಂದ ಪಾದಯಾತ್ರೆ ಮೂಲಕ ಆಗಮಿಸಿದೆ. ಸದ್ಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇವಸ್ಥಾನದಿಂದ ತನ್ವೀರ್ಗೆ ಅದ್ದೂರಿ ಸ್ವಾಗತ ದೊರೆತಿದೆ. ಇಂದಿನ ಸರ್ವಧರ್ಮ ಸಮ್ಮೇಳನದಲ್ಲಿ ತನ್ವೀರ್ ಅಹಮ್ಮದ್ ಉಲ್ಲಾ ಪ್ರಮುಖ ಭಾಷಣ ಮಾಡಲಿದ್ದು, ಸಚಿವ ಎಂ.ಬಿ. ಪಾಟೀಲ್ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಮಂಗಳೂರು, ನವೆಂಬರ್ 18: ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಮುಸ್ಲಿಂ ಚಿಂತಕ ತನ್ವೀರ್ ಅಹಮ್ಮದ್ ಉಲ್ಲಾ ನೇತೃತ್ವದ ತಂಡ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದೆ. ಸದ್ಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದೇವಸ್ಥಾನದಿಂದ ತನ್ವೀರ್ಗೆ ಅದ್ದೂರಿ ಸ್ವಾಗತ ದೊರೆತಿದೆ. ಇಂದಿನ ಸರ್ವಧರ್ಮ ಸಮ್ಮೇಳನದಲ್ಲಿ ತನ್ವೀರ್ ಅಹಮ್ಮದ್ ಉಲ್ಲಾ ಪ್ರಮುಖ ಭಾಷಣ ಮಾಡಲಿದ್ದು, ಸಚಿವ ಎಂ.ಬಿ. ಪಾಟೀಲ್ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 18, 2025 01:00 PM