ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಬದಲಾವಣೆಗೆ ಬುರುಡೆ ಗ್ಯಾಂಗ್ ಒತ್ತಾಯ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ಬದಲಾವಣೆಗೆ ಬುರುಡೆ ಗ್ಯಾಂಗ್ ಒತ್ತಾಯಿಸಿದೆ. ಮಂಗಳೂರಿನಲ್ಲಿ ಅವರ ಹಿಂದಿನ ಸೇವೆಯ ಕಾರಣ ನೀಡಿ, ನಿಷ್ಪಕ್ಷಪಾತ ತನಿಖೆಗೆ ಅಡ್ಡಿಯಾಗಬಹುದೆಂದು ಆರೋಪಿಸಿದೆ. ಗೃಹ ಸಚಿವರ ಭೇಟಿ ಬಳಿಕ ಶಶಿಕುಮಾರ್ ಬದಲಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು, ಅಕ್ಟೋಬರ್ 26: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ಐಟಿ) ಮುಖ್ಯಸ್ಥರಾಗಿರುವ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರನ್ನು ಬದಲಿಸುವಂತೆ ‘ಬುರುಡೆ ಗ್ಯಾಂಗ್’ ಒತ್ತಾಯಿಸಿದೆ. ಮಂಗಳೂರಿನಲ್ಲಿ ಶಶಿಕುಮಾರ್ ಅವರು ಹಿಂದೆ ಕರ್ತವ್ಯ ನಿರ್ವಹಿಸಿದ್ದನ್ನು ಕಾರಣವಾಗಿಟ್ಟುಕೊಂಡು, ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಕಷ್ಟವಾಗಬಹುದು ಎಂದು ಆ ಸಂಘಟನೆ ವಾದಿಸಿದೆ. ಶಶಿಕುಮಾರ್ ಅವರನ್ನು ಸಮರ್ಥ ಮತ್ತು ದಕ್ಷ ಅಧಿಕಾರಿ ಎಂದು ಪರಿಗಣಿಸಲಾಗಿದ್ದರೂ, ಅವರ ಬದಲಾವಣೆಗೆ ಬೇಡಿಕೆ ವ್ಯಕ್ತವಾಗಿರುವುದು ಹಲವರಲ್ಲಿ ಆಶ್ಚರ್ಯ ಮೂಡಿಸಿದೆ. ಬುರುಡೆ ಗ್ಯಾಂಗ್ ಈ ಕುರಿತು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದು, ಅದಕ್ಕೂ ಮುನ್ನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ಮನವಿಯ ನಂತರ, ಶಶಿಕುಮಾರ್ ಅವರ ಸ್ಥಾನಕ್ಕೆ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ದಕ್ಷ ಅಧಿಕಾರಿಗಳನ್ನು ಒಂದೆಡೆ ಕೆಲಸ ಮಾಡಿದ್ದ ಕಾರಣಕ್ಕೆ ಬದಲಾಯಿಸುವುದು ಸರಿಯಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಗೃಹ ಸಚಿವರು ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಬದಲಾವಣೆ ಆಗುವ ಸಾಧ್ಯತೆ ಹೆಚ್ಚಿದೆ ಎಂಬುದು ತಿಳಿದುಬಂದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

