Dharmasthala Temple: ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ

Updated on: Feb 28, 2026 | 11:24 AM

ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು. ಬಹುತೇಕ ದೇವಸ್ಥಾನಗಳಲ್ಲಿ ಗ್ರಹಣದ ಸಂದರ್ಭದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂಬ ನಿಯಮಕ್ಕೆ ಅನುಗುಣವಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿಯೂ ಭಕ್ತಾದಿಗಳ ಅನುಕೂಲ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಕ್ತಾದಿಗಳು ಈ ಬದಲಾದ ದರ್ಶನ ಸಮಯಗಳನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನಕ್ಕೆ ಆಗಮಿಸುವಂತೆ ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.

ದಕ್ಷಿಣ ಕನ್ನಡ, ಫೆಬ್ರವರಿ 28: ಮಾರ್ಚ್ 3 ರಂದು ಸಂಭವಿಸಲಿರುವ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಭಕ್ತರಿಗೆ ಅಗತ್ಯ ಸೂಚನೆಗಳನ್ನು ನೀಡಿದೆ.

ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು. ಬಹುತೇಕ ದೇವಸ್ಥಾನಗಳಲ್ಲಿ ಗ್ರಹಣದ ಸಂದರ್ಭದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂಬ ನಿಯಮಕ್ಕೆ ಅನುಗುಣವಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿಯೂ ಭಕ್ತಾದಿಗಳ ಅನುಕೂಲ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಕ್ತಾದಿಗಳು ಈ ಬದಲಾದ ದರ್ಶನ ಸಮಯಗಳನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನಕ್ಕೆ ಆಗಮಿಸುವಂತೆ ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.\

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More