ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ

Updated on: May 25, 2026 | 7:11 PM

ಮನರಂಜನಾ ಕ್ಷೇತ್ರದಿಂದ ದಿವಂಗತ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಧರ್ಮೇಂದ್ರ ಪರವಾಗಿ ಅವರ ಪತ್ನಿ ಹೇಮಾ ಮಾಲಿನಿ ಅವರು ಇಂದು (ಮೇ 25) ಪ್ರಶಸ್ತಿ ಸ್ವೀಕರಿಸಿದ್ದಾರೆ. ವಿಡಿಯೋ ಇಲ್ಲಿದೆ..

‘ಪದ್ಮ ಪ್ರಶಸ್ತಿ 2026’ ಪ್ರದಾನ ಸಮಾರಂಭವು ಇಂದು (ಮೇ 25) ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಚಿತ್ರರಂಗ, ಸಂಗೀತ, ರಂಗಭೂಮಿ ಮುಂತಾದ ಕ್ಷೇತ್ರದ ಅನೇಕ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಇದರಲ್ಲಿ 5 ಪದ್ಮ ವಿಭೂಷಣ (Padma Vibhushan) , 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಮನರಂಜನಾ ಕ್ಷೇತ್ರದಿಂದ ದಿವಂಗತ ನಟ ಧರ್ಮೇಂದ್ರ (Dharmendra) ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಧರ್ಮೇಂದ್ರ ಪರವಾಗಿ ಅವರ ಪತ್ನಿ ಹೇಮಾ ಮಾಲಿನಿ (Hema Malini) ಅವರು ಇಂದು (ಮೇ 25) ಪ್ರಶಸ್ತಿ ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More