ರಾಜೀನಾಮೆ ಬಳಿಕ ಮೊದಲ ಬಾರಿಗೆ ಲೋಕಸಭೆಗೆ ಬಂದ ಧರ್ಮೇಂದ್ರ ಪ್ರಧಾನ್, ಜಿಂದಾಬಾದ್ ಜಯಘೋಷದೊಂದಿಗೆ ಎನ್​ಡಿಎ ಸಂಸದರ ಸ್ವಾಗತ

Updated on: Jul 27, 2026 | 1:01 PM

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಒಡಿಶಾದ ಸಂಸದ ಧರ್ಮೇಂದ್ರ ಪ್ರಧಾನ್ ಸೋಮವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಮೊದಲ ಬಾರಿಗೆ ಲೋಕಸಭೆಗೆ ಆಗಮಿಸಿದ್ದರು. ಅವರು ಸದನದೊಳಗೆ ಪ್ರವೇಶಿಸುತ್ತಿದ್ದಂತೆ ಲೋಕಸಭೆಯಲ್ಲಿ ಕುತೂಹಲಕಾರಿ ವಾತಾವರಣ ನಿರ್ಮಾಣವಾಯಿತು. ಧರ್ಮೇಂದ್ರ ಪ್ರಧಾನ್ ಅವರನ್ನು ಕಂಡ ತಕ್ಷಣವೇ ಬಿಜೆಪಿ ಹಾಗೂ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಸಂಸದರು ಧರ್ಮೇಂದ್ರ ಪ್ರಧಾನ್ ಜಿಂದಾಬಾದ ಎಂದು ಜೈಕಾರ ಕೂಗುವ ಮೂಲಕ ಅವರನ್ನು ಬರಮಾಡಿಕೊಂಡರು.

ನವದೆಹಲಿ, ಜುಲೈ 27: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಒಡಿಶಾದ ಸಂಸದ ಧರ್ಮೇಂದ್ರ ಪ್ರಧಾನ್ ಸೋಮವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಮೊದಲ ಬಾರಿಗೆ ಲೋಕಸಭೆಗೆ ಆಗಮಿಸಿದ್ದರು. ಅವರು ಸದನದೊಳಗೆ ಪ್ರವೇಶಿಸುತ್ತಿದ್ದಂತೆ ಲೋಕಸಭೆಯಲ್ಲಿ ಕುತೂಹಲಕಾರಿ ವಾತಾವರಣ ನಿರ್ಮಾಣವಾಯಿತು. ಧರ್ಮೇಂದ್ರ ಪ್ರಧಾನ್ ಅವರನ್ನು ಕಂಡ ತಕ್ಷಣವೇ ಬಿಜೆಪಿ ಹಾಗೂ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಸಂಸದರು ಧರ್ಮೇಂದ್ರ ಪ್ರಧಾನ್ ಜಿಂದಾಬಾದ್ ಎಂದು ಜೈಕಾರ ಕೂಗುವ ಮೂಲಕ ಅವರನ್ನು ಬರಮಾಡಿಕೊಂಡರು.

ಸಚಿವ ಸ್ಥಾನ ತ್ಯಜಿಸಿದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಪಕ್ಷದ ತತ್ವಕ್ಕಾಗಿ ನೈತಿಕ ಹೊಣೆ ಹೊತ್ತು ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಬಿಜೆಪಿ ಮತ್ತು ಮೈತ್ರಿಕೂಟದ ನಾಯಕರು ಪ್ರಧಾನ್ ಅವರ ನಿರ್ಧಾರವನ್ನು ಶ್ಲಾಘಿಸಿದರು.
ನೀಟ್-ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ ಸತತ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಧರ್ಮೇಂದ್ರ ಪ್ರಧಾನ್ ಅವರು ಜುಲೈ 25 ರಂದು ತಮ್ಮ ಶಿಕ್ಷಣ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದರು. ದೇಶದ ಯುವಶಕ್ತಿ ಗೊಂದಲಕ್ಕೆ ಸಿಲುಕಬಾರದು ಹಾಗೂ ಪ್ರತಿಭಟನೆಯನ್ನು ದೇಶವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More