ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ರೆ, ಸಿಜೆಪಿ ತನ್ನ ಪ್ರತಿಭಟನೆ ಇಲ್ಲಿಗೆ ನಿಲ್ಲಿಸುತ್ತಾ ಅಥವಾ ಮುಂದುವರೆಸುತ್ತಾ ಎನ್ನುವ ಬಗ್ಗೆ ಇನ್ನೂ ಗೊಂದಲದಲ್ಲಿದೆ. ಈ ಬಗ್ಗೆ ಕಾಕ್ರೋಚ್ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಮಾತನಾಡಿ, "ನಮ್ಮ ಮೂರು ಬೇಡಿಕೆಗಳನ್ನು ನೀವು (ಕೇಂದ್ರ ಸರ್ಕಾರ) ಲಿಖಿತವಾಗಿ ಬರೆದುಕೊಟ್ಟರೆ ಪ್ರತಿಭಟನೆ ನಿಲ್ಲಿಸಿ ನಾವು ಮನೆಗೆ ಹೋಗುತ್ತೇವೆ. ದೇಶಾದ್ಯಂತ ಶಾಂತಿಯುತವಾಗಿ ಮೇಣದಬತ್ತಿ ಮೆರವಣಿಗೆ ನಡೆಸಲು ನಾವು ಅನುಮತಿ ಕೋರಿದ್ದೇವೆ. ಸಂಜೆ 6:00 ಗಂಟೆಗೆ ದೇಶಾದ್ಯಂತ ಮೇಣದಬತ್ತಿ ಮೆರವಣಿಗೆ ನಡೆಸಬೇಕು" ಎಂದು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ರೆ, ಸಿಜೆಪಿ ತನ್ನ ಪ್ರತಿಭಟನೆ ಇಲ್ಲಿಗೆ ನಿಲ್ಲಿಸುತ್ತಾ ಅಥವಾ ಮುಂದುವರೆಸುತ್ತಾ ಎನ್ನುವ ಬಗ್ಗೆ ಇನ್ನೂ ಗೊಂದಲದಲ್ಲಿದೆ. ಈ ಬಗ್ಗೆ ಕಾಕ್ರೋಚ್ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಮಾತನಾಡಿ, “ನಮ್ಮ ಮೂರು ಬೇಡಿಕೆಗಳನ್ನು ನೀವು (ಕೇಂದ್ರ ಸರ್ಕಾರ) ಲಿಖಿತವಾಗಿ ಬರೆದುಕೊಟ್ಟರೆ ಪ್ರತಿಭಟನೆ ನಿಲ್ಲಿಸಿ ನಾವು ಮನೆಗೆ ಹೋಗುತ್ತೇವೆ. ದೇಶಾದ್ಯಂತ ಶಾಂತಿಯುತವಾಗಿ ಮೇಣದಬತ್ತಿ ಮೆರವಣಿಗೆ ನಡೆಸಲು ನಾವು ಅನುಮತಿ ಕೋರಿದ್ದೇವೆ. ಸಂಜೆ 6:00 ಗಂಟೆಗೆ ದೇಶಾದ್ಯಂತ ಮೇಣದಬತ್ತಿ ಮೆರವಣಿಗೆ ನಡೆಸಬೇಕು” ಎಂದು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಇನ್ನೊಂದೆಡೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದಂತೆಯೇ ಸಿಜೆಪಿ ಕಾರ್ಯಕರ್ಯಕರ್ತರು, ಮುಖಂಡರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ ನೀಡಿದ್ದಾರೆ. ಇದು ನಮ್ಮ ಧೈರ್ಯಕ್ಕೆ ಹೋರಾಟಕ್ಕೆ ಸಿಕ್ಕ ಜಯ, ನಾವು ನಿರ್ಭಯದಿಂದ ಹೋರಾಡಿದರೆ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯಾರಿಗೂ ಭಯಪಡಬೇಕಿಲ್ಲ. ನಿರ್ಭೀತ ಹೋರಾಟದಿಂದ ನಾವು ಯಾರ ರಾಜೀನಾಮೆಯನ್ನು ಬೇಕಾದರೂ ಪಡೆಯಬಹುದು ಎನ್ನುವುದಕ್ಕೆ ಇದು ಪುರಾವೆ ಎಂದಿದ್ದಾರೆ.
ಇದನ್ನೂ ನೋಡಿ: ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ ‘ಜಿರಲೆ’, ಕೊನೆಗೂ ರಾಜೀನಾಮೆ ಸಲ್ಲಿಕೆ
Published on: Jul 25, 2026 03:44 PM
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ

