‘ನಮ್ಮ ಕಷ್ಟ ಅರ್ಥ ಮಾಡಿಕೊಳ್ಳಿ’: ರೀಲ್ಸ್ ಮೂಲಕ ಗ್ರಾಮದ ಸಮಸ್ಯೆ ತೆರೆದಿಟ್ಟ ಬಾಲಕ
ಧಾರವಾಡದ ಹಾರೋಬೆಳವಡಿ ಗ್ರಾಮದ ಬಾಲಕನೊಬ್ಬ ರಸ್ತೆ ಸಮಸ್ಯೆಯ ಕುರಿತು ಮಾಡಿದ ರೀಲ್ ವೈರಲ್ ಆಗಿದೆ. ತಮ್ನೂರಿನಿಂದ ಆಯಟ್ಟಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಹಾಗೂ ಜನರ ಸಂಚಾರಕ್ಕೆ ಅಡಚಣೆಯಾಗಿದೆ. ಶಾಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದ್ದು, ಬಾಲಕ ಕೈ ಮುಗಿದು ದುರಸ್ತಿಗೆ ಮನವಿ ಮಾಡಿದ್ದಾನೆ. ಈ ವೀಡಿಯೋದಿಂದ ಗ್ರಾಮಸ್ಥರ ಕಷ್ಟ ಬೆಳಕಿಗೆ ಬಂದಿದೆ.
ಧಾರವಾಡ, ಸೆಪ್ಟೆಂಬರ್ 23: ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಶಾಲಾ ಬಾಲಕನೊಬ್ಬ ತಮ್ಮ ಊರಿನ ರಸ್ತೆ ದುರವಸ್ಥೆಯನ್ನು ರೀಲ್ಸ್ ಮೂಲಕ ತೆರೆದಿಟ್ಟಿದ್ದು, ದುರಸ್ತಿಗೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಹಾರೋಬೆಳವಡಿಯಿಂದ ಆಯಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರವಷ್ಟೇ ಅಲ್ಲದೆ ಸಾರ್ವಜನಿಕರು ಕಾಲ್ನಡಿಗೆಯಲ್ಲೂ ಓಡಾಡಲು ಸಾಧ್ಯವಾಗದ ಸ್ಥಿತಿಯಲ್ಲಿದೆ ಎಂದು ವಿದ್ಯಾರ್ಥಿ ವಿಡಿಯೋದಲ್ಲಿ ಹೇಳಿದ್ದಾನೆ. ರಸ್ತೆ ಗುಂಡಿಗಳಿಂದಾಗಿ ಶಾಲೆಗೆ ಹೋಗಲು ತೀವ್ರ ತೊಂದರೆಯಾಗುತ್ತಿದ್ದು, ‘ನಮ್ಮ ಕಷ್ಟವನ್ನು ಅರ್ಥ ಮಾಡಿಕೊಳ್ಳಿ’ ಎಂದು ಕೈ ಮುಗಿದು ಅಂಗಲಾಚಿರುವ ಬಾಲಕ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿ ಮಾಡಿಸಬೇಕೆಂದು ವಿನಂತಿಸಿದ್ದಾನೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

