‘ನಮ್ಮ ಕಷ್ಟ ಅರ್ಥ ಮಾಡಿಕೊಳ್ಳಿ’: ರೀಲ್ಸ್ ಮೂಲಕ ಗ್ರಾಮದ ಸಮಸ್ಯೆ ತೆರೆದಿಟ್ಟ ಬಾಲಕ

Edited By:

Updated on: Sep 23, 2026 | 9:59 PM

ಧಾರವಾಡದ ಹಾರೋಬೆಳವಡಿ ಗ್ರಾಮದ ಬಾಲಕನೊಬ್ಬ ರಸ್ತೆ ಸಮಸ್ಯೆಯ ಕುರಿತು ಮಾಡಿದ ರೀಲ್ ವೈರಲ್ ಆಗಿದೆ. ತಮ್ನೂರಿನಿಂದ ಆಯಟ್ಟಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಹಾಗೂ ಜನರ ಸಂಚಾರಕ್ಕೆ ಅಡಚಣೆಯಾಗಿದೆ. ಶಾಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತಿದ್ದು, ಬಾಲಕ ಕೈ ಮುಗಿದು ದುರಸ್ತಿಗೆ ಮನವಿ ಮಾಡಿದ್ದಾನೆ. ಈ ವೀಡಿಯೋದಿಂದ ಗ್ರಾಮಸ್ಥರ ಕಷ್ಟ ಬೆಳಕಿಗೆ ಬಂದಿದೆ.

ಧಾರವಾಡ, ಸೆಪ್ಟೆಂಬರ್​ 23: ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಶಾಲಾ ಬಾಲಕನೊಬ್ಬ ತಮ್ಮ ಊರಿನ ರಸ್ತೆ ದುರವಸ್ಥೆಯನ್ನು ರೀಲ್ಸ್ ಮೂಲಕ ತೆರೆದಿಟ್ಟಿದ್ದು, ದುರಸ್ತಿಗೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಹಾರೋಬೆಳವಡಿಯಿಂದ ಆಯಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರವಷ್ಟೇ ಅಲ್ಲದೆ ಸಾರ್ವಜನಿಕರು ಕಾಲ್ನಡಿಗೆಯಲ್ಲೂ ಓಡಾಡಲು ಸಾಧ್ಯವಾಗದ ಸ್ಥಿತಿಯಲ್ಲಿದೆ ಎಂದು ವಿದ್ಯಾರ್ಥಿ ವಿಡಿಯೋದಲ್ಲಿ ಹೇಳಿದ್ದಾನೆ. ರಸ್ತೆ ಗುಂಡಿಗಳಿಂದಾಗಿ ಶಾಲೆಗೆ ಹೋಗಲು ತೀವ್ರ ತೊಂದರೆಯಾಗುತ್ತಿದ್ದು, ‘ನಮ್ಮ ಕಷ್ಟವನ್ನು ಅರ್ಥ ಮಾಡಿಕೊಳ್ಳಿ’ ಎಂದು ಕೈ ಮುಗಿದು ಅಂಗಲಾಚಿರುವ ಬಾಲಕ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಈ ರಸ್ತೆಯನ್ನು ದುರಸ್ತಿ ಮಾಡಿಸಬೇಕೆಂದು ವಿನಂತಿಸಿದ್ದಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More