ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ಕಾರ್ಯಾಗಾರ
ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಅಧಿವೇಶನ ಹಿನ್ನಲೆ ಹಲವಾರು ಕಡೆಗಳಿಂದ ಪಿಎಸ್ಐ ಪ್ರಶಿಕ್ಷಣಾರ್ಥಿಗಳು ಬಂದಿದ್ಧಾರೆ. ಟಾಪ್ 10 ಪ್ರಶಿಕ್ಷಣಾರ್ಥಿಗಳ ಮೂಲಕ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಧಾರವಾಡ, ಡಿಸೆಂಬರ್ 15: ಉದ್ಯೋಗಾಕಾಂಕ್ಷಿಗಳಿಗೆ ಟಾಪ್ 10 ಪ್ರಶಿಕ್ಷಣಾರ್ಥಿಗಳ ಮೂಲಕ ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ನಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೀಗ ಬೆಳಗಾವಿಯಲ್ಲಿ ಅಧಿವೇಶನ ನಡೆದಿದೆ. ಈ ಅಧಿವೇಶನಕ್ಕೆ ಹಲವಾರು ಕಡೆಗಳಿಂದ ಪಿಎಸ್ಐ ಪ್ರಶಿಕ್ಷಣಾರ್ಥಿಗಳು ಬಂದಿದ್ಧಾರೆ. ಇದೇ ವೇಳೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳಿಗಾಗಿ ವಿಶೇಷ ಕೋಚಿಂಗ್ ನೀಡಲು ನಿರ್ಧರಿಸಲಾಗಿದೆ. ನಗರದ ಹತ್ತು ಕಾಲೇಜು ಹಾಗೂ ಕೋಚಿಂಗ್ ಸೆಂಟರ್ಗಳಲ್ಲಿ ಇಂದಿನಿಂದಲೇ ತರಬೇತಿ ಆರಂಭವಾಗಿದೆ. ಈಗಾಗಲೇ 2 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್ ಮಾತು
ರಾಜಶೇಖರ್ ತಾಯಿಗೆ ಡಿಕೆ ಶಿವಕುಮಾರ್ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್ ದಂಧೆಕೋರರಿಗೆ ಶಾಕ್: 3 ಕೆ.ಜಿ. MDMA ಸೀಜ್, ಇಬ್ಬರು ಅರೆಸ್ಟ್

