ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ಕಾರ್ಯಾಗಾರ

Edited By:

Updated on: Dec 15, 2025 | 4:55 PM

ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಅಧಿವೇಶನ ಹಿನ್ನಲೆ ಹಲವಾರು ಕಡೆಗಳಿಂದ ಪಿಎಸ್​ಐ ಪ್ರಶಿಕ್ಷಣಾರ್ಥಿಗಳು ಬಂದಿದ್ಧಾರೆ. ಟಾಪ್ 10 ಪ್ರಶಿಕ್ಷಣಾರ್ಥಿಗಳ ಮೂಲಕ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಧಾರವಾಡ, ಡಿಸೆಂಬರ್​ 15: ಉದ್ಯೋಗಾಕಾಂಕ್ಷಿಗಳಿಗೆ ಟಾಪ್ 10 ಪ್ರಶಿಕ್ಷಣಾರ್ಥಿಗಳ ಮೂಲಕ ಪೊಲೀಸ್ ಇಲಾಖೆಯಿಂದಲೇ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ನಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೀಗ ಬೆಳಗಾವಿಯಲ್ಲಿ ಅಧಿವೇಶನ ನಡೆದಿದೆ. ಈ ಅಧಿವೇಶನಕ್ಕೆ ಹಲವಾರು ಕಡೆಗಳಿಂದ ಪಿಎಸ್​ಐ ಪ್ರಶಿಕ್ಷಣಾರ್ಥಿಗಳು ಬಂದಿದ್ಧಾರೆ. ಇದೇ ವೇಳೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳಿಗಾಗಿ ವಿಶೇಷ ಕೋಚಿಂಗ್ ನೀಡಲು ನಿರ್ಧರಿಸಲಾಗಿದೆ. ನಗರದ ಹತ್ತು ಕಾಲೇಜು ಹಾಗೂ ಕೋಚಿಂಗ್ ಸೆಂಟರ್​ಗಳಲ್ಲಿ ಇಂದಿನಿಂದಲೇ ತರಬೇತಿ ಆರಂಭವಾಗಿದೆ. ಈಗಾಗಲೇ 2 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More