ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

Edited By:

Updated on: Mar 14, 2026 | 7:38 PM

ಧಾರವಾಡ ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಹಲವು ದಿನಗಳಿಂದ ಕಾಡಿದ್ದ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಈ ಅನಿರೀಕ್ಷಿತ ಮಳೆ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಸಾರ್ವಜನಿಕರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ, ಮಳೆಯೊಂದಿಗೆ ಬೀಸಿದ ಪ್ರಬಲ ಗಾಳಿಯು ಮಾವಿನ ಬೆಳೆಗೆ ಗಂಭೀರ ಸಂಕಷ್ಟವನ್ನು ತಂದೊಡ್ಡಿದ್ದು, ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ.

ಧಾರವಾಡ, ಮಾರ್ಚ್​​ 14: ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗಿದೆ. ಜನರು ಸೆಕೆಗೆ ಬೇಸತ್ತಿದ್ದಾರೆ. ಈ ಮಧ್ಯೆ ವಿದ್ಯಾಕಾಶಿ ಧಾರವಾಡಲ್ಲಿ ಇಂದು ಆಲಿಕಲ್ಲು ಸಹಿತ ಭಾರಿ ಮಳೆ ಆಗಿದೆ. ಆ ಮೂಲಕ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ವರುಣ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಮಾವಿನ ಬೆಳೆಗೆ ಈ ಬಾರಿಯೂ ಮಳೆ ಕಂಟಕವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More