AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತ ತಂದೆಯಿಂದಲೇ ಗರ್ಭಿಣಿ ಮಗಳ ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ

ಹೆತ್ತ ತಂದೆಯಿಂದಲೇ ಗರ್ಭಿಣಿ ಮಗಳ ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ

ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 22, 2025 | 10:35 AM

Share

ಹುಬ್ಬಳ್ಳಿಯಲ್ಲಿ 7 ತಿಂಗಳ ಗರ್ಭಿಣಿ ಮಾನ್ಯ ಪಾಟೀಲ್ ಅವರ ಮೇಲೆ ತಂದೆ ಪ್ರಕಾಶ್ ಮತ್ತು ಇಬ್ಬರು ಸಂಬಂಧಿಕರು ಭೀಕರವಾಗಿ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಮಾನ್ಯ ಸಾವನ್ನಪ್ಪಿದ್ದಾರೆ. ಅಂತರಜಾತಿ ವಿವಾಹವೇ ಈ ಹಲ್ಲೆಗೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಎಫ್‌ಐಆರ್ ದಾಖಲಿಸಲಾಗಿದೆ. ಘಟನೆ ಬಗ್ಗೆ ಎಸ್​ಪಿ ನೀಡಿದ ಮಾಹಿತಿ ಇಲ್ಲಿದೆ.

ಹುಬ್ಬಳ್ಳಿ, ಡಿಸೆಂಬರ್ 22: ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್ ಆರ್ಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಾನ್ಯ ಪಾಟೀಲ್ ಮೇಲೆ ಅವರ ತಂದೆ ಪ್ರಕಾಶ್, ವೀರಣ್ಣ ಮತ್ತು ಅರುಣ್ ಎಂಬುವವರು ಹಲ್ಲೆ ನಡೆಸಿದ್ದು, ಈ ಘಟನೆಯಲ್ಲಿ ಮಾನ್ಯ ಸಾವನ್ನಪ್ಪಿದ್ದಾರೆ. ಸಂಜೆ ಸುಮಾರು 6 ರಿಂದ 6.30ರ ಸುಮಾರಿಗೆ ಮನೆಯಲ್ಲಿ ಹಲ್ಲೆ ನಡೆದಿದ್ದು, ರಾತ್ರಿ 9.30ರ ಸುಮಾರಿಗೆ ಮಾನ್ಯ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೆ ಸ್ಪ್ರಿಂಕ್ಲರ್ ಪೈಪ್ ಮತ್ತು ಕೊಡಲಿಯನ್ನು ಬಳಸಲಾಗಿದ್ದು, ಮಾನ್ಯ ತಲೆಗೆ ಗಂಭೀರ ಏಟಾಗಿತ್ತು. ಈ ಘಟನೆಗೆ ಅಂತರಜಾತಿ ವಿವಾಹವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಪೊಲೀಸರು ತಿಳಿಸಿದ್ದಾರೆ. ಮಾನ್ಯ ಅವರ ಮಾವ ಮತ್ತು ಅತ್ತೆಗೂ ಗಾಯಗಳಾಗಿವೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರಕಾಶ್ ಮತ್ತು ಅವರ ಇಬ್ಬರು ಸಂಬಂಧಿಕರನ್ನು ವಶಕ್ಕೆ ಪಡೆದಿದ್ದು, ಎಫ್‌ಐಆರ್ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರವನ್ನು ಪೊಲೀಸರು ಕೋರಿದ್ದಾರೆ.

ಪ್ರಕರಣದ ಸಂಪೂರ್ಣ ವಿವರಗಳಿಗೆ ಓದಿ: ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ

ವಿಡಿಯೋ ನೋಡಿ: ‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ