‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ

Edited By:

Updated on: Dec 22, 2025 | 9:42 AM

ಹುಬ್ಬಳ್ಳಿಯಲ್ಲಿ ನಡೆದ ಭೀಕರ ಘಟನೆಯಲ್ಲಿ, ಅನ್ಯಜಾತಿ ಯುವಕನನ್ನು ಮದುವೆಯಾಗಿದ್ದ 7 ತಿಂಗಳ ಗರ್ಭಿಣಿ ಮಗಳನ್ನು ಆಕೆಯ ತಂದೆಯೇ ಹತ್ಯೆ ಮಾಡಿದ್ದಾನೆ. ಸಂತ್ರಸ್ತರ ಕುಟುಂಬದವರು ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದು, ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ. ಹತ್ಯೆಯ ಭಯಾನಕತೆಯನ್ನು ಯುವಕನ ದೊಡ್ಡಮ್ಮ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಇಡೀ ಧಾರವಾಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ 7 ತಿಂಗಳ ಗರ್ಭಿಣಿಯಾಗಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದೆ. ಘಟನೆಯ ಭೀಕರತೆಯನ್ನು ಯುವಕ ವಿವೇಕಾನಂದನ ದೊಡ್ಡಮ್ಮ ಜಯಶ್ರೀ ಬಹಿರಂಗಪಡಿಸಿದ್ದು, ಆ ಹುಡುಗಿಯನ್ನು ನಮ್ಮ ಹುಡುಗ ಮದುವೆಯಾಗಿದ್ದು ತಪ್ಪೇ? ನಮ್ಮ ಮಕ್ಕಳನ್ನು ಹೊಡೆದುಹಾಕಿದ್ದಾರೆ. ಮದುವೆಯಾಗಿ ತಿಂಗಳುಗಳೇ ಆಗಿದ್ದವು. ಹುಡುಗಿ ಏಳು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಕಣ್ಣೀರು ಹಾಕಿದ್ದಾರೆ. ಅವರು ‘‘ದೊಡ್ಡ ಜಾತಿ, ನಾವು ಸಣ್ಣ ಜಾತಿ’’ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಅವರು ಅಳಲುತೋಡಿಕೊಂಡಿದ್ದಾರೆ.

ಪ್ರಕರಣದ ಸಂಪೂರ್ಣ ವಿವರಗಳಿಗೆ ಓದಿ: ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 22, 2025 09:35 AM