AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು

ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Feb 05, 2026 | 5:40 PM

Share

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1,350 ರೂ.ನಿಂದ 4,000 ರೂ.ಗೆ ಶುಲ್ಕ ಏರಿಕೆಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಸುಟ್ಟು, ಕುಲಪತಿಗಳ ಕಚೇರಿ ಮುಂದೆ ಕಣ್ಣೀರಿಟ್ಟಿದ್ದಾರೆ.

ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುಟ್ಟುಹಾಕಿ ವಿದ್ಯಾರ್ಥಿಗಳು ಕಣ್ಣೀರಿಟ್ಟಿರುವಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ಸಂಶೋಧನಾ ವಿದ್ಯಾರ್ಥಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More