Pralhad Joshi Nomination File Live Coverage: ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ, ಯಡಿಯೂರಪ್ಪ, ಬೊಮ್ಮಾಯಿ ಸಾಥ್​​

Pralhad Joshi Nomination File Live Coverage: ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ, ಯಡಿಯೂರಪ್ಪ, ಬೊಮ್ಮಾಯಿ ಸಾಥ್​​

ವಿವೇಕ ಬಿರಾದಾರ
|

Updated on: Apr 15, 2024 | 12:39 PM

ಇಂದು (ಏ.15) ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಹ್ಲಾದ್​ ಜೋಶಿ ಅವರು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಾಥ್ ನೀಡಲಿದ್ದಾರೆ.

ಹುಬ್ಬಳ್ಳಿ, ಏಪ್ರಿಲ್​ 15: ಕರ್ನಾಟಕದ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು (ಏ.15) ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ (Pralhad Joshi) ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಹ್ಲಾದ್​ ಜೋಶಿ ಅವರು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಾಥ್ ನೀಡಲಿದ್ದಾರೆ. ​​ ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ರಾಘವೇಂದ್ರ ಮಠ, ಸಿದ್ದಾರೂಢ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಧಾರವಾಡದ ಶಿವಾಜಿ ಸರ್ಕಲ್​​ನಿಂದ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮುಖಾಂತರ ಸಾಗಿ, ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಭವಾನಿ ನಗರದಲ್ಲಿರುವ ಪ್ರಹ್ಲಾದ್​ ಜೋಶಿ ಅವರ ಮನೆಯನ್ನು ಹೂವಿನಿಂದ ಅಲಂಕಾರ ಮಾಡಲಾಗಿದೆ.

ನನಗೆ ವಿಶ್ವಾಸ ಇದೆ, ಜ‌ನರು ಆಶೀರ್ವಾದ ಮಾಡುತ್ತಾರೆ: ಜೋಶಿ

ನನಗೆ ವಿಶ್ವಾಸ ಇದೆ, ಜ‌ನರು ಆಶೀರ್ವಾದ ಮಾಡುತ್ತಾರೆ. ಚುನಾವಣೆ ಅಂದ ಮೇಲೆ ತಂತ್ರ, ಕುತಂತ್ರಗಳು ಇರುತ್ತೆ. ಒಂದೊಂದು ಚುನಾವಣೆಯಲ್ಲೂ ಒಂದೊಂದು ತಂತ್ರ. ಆದರೆ, ಜನರು ಆಶೀರ್ವಾದ ಮಾಡುತ್ತಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಗ್ಯಾರಂಟಿ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹೇಳಿದರು.