ಧಾರವಾಡ: ಸರ್ಕಾರಿ ಶಾಲಾ ಆವರಣದಲ್ಲಿ ಗುಂಡು ಪಾರ್ಟಿ!

Edited By:

Updated on: Sep 04, 2024 | 11:54 AM

ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯ ಮನಸೂರ ಗ್ರಾಮದ‌ ಹೊರವಲಯದ ಸರ್ಕಾರಿ ಶಾಲೆಯ ಜಗುಲಿಯಲ್ಲಿ ದುರುಳರು ಮದ್ಯಪಾನ ಪಾರ್ಟಿ ಮಾಡಿ ತ್ಯಾಜ್ಯ ಬಿಟ್ಟುಹೋದ ಘಟನೆ ವರದಿಯಾಗಿದೆ. ದುಷ್ಕರ್ಮಿಗಳು ಅಧ್ವಾನ ಮಾಡಿ ಹೋದ ಕೃತ್ಯಕ್ಕೆ ಸಂಬಂಧಿಸಿದ ವಿಡಿಯೋ ಇಲ್ಲಿದೆ ನೋಡಿ.

ಧಾರವಾಡ, ಸೆಪ್ಟೆಂಬರ್ 4: ಧಾರವಾಡ ತಾಲೂಕಿನ ಮನಸೂರ ಗ್ರಾಮದ‌ ಹೊರವಲಯದಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿ ದುಷ್ಕರ್ಮಿಗಳು ಮದ್ಯಪಾನ ಪಾರ್ಟಿ ಮಾಡಿ ಮದ್ಯದ ಪ್ಯಾಕೆಟ್, ಇತರೆ ತ್ಯಾಜ್ಯ ಬಿಟ್ಟು ಹೋದ ಘಟನೆ ಬುಧವಾರ ಬೆಳಗ್ಗೆ ಬೆಳಕಿಬಗೆ ಬಂದಿದೆ. ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿ ಪಾರ್ಟಿ ಮಾಡಿ ಮದ್ಯದ ಟೆಟ್ರಾ ಪ್ಯಾಕ್, ಆಹಾರದ ಕವರ್ ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಬೆಳಗ್ಗೆ ಶಾಲೆಯ ಬಾಗಿಲು ತೆರೆಯಲು ಬಂದಾಗ ಶಿಕ್ಷಕರಿಗೆ ಆಘಾತ ಕಾದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More