AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಪೊಲೀಸರಿಂದ ಬಿಗಿ ಭದ್ರತೆ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಪೊಲೀಸರಿಂದ ಬಿಗಿ ಭದ್ರತೆ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 18, 2026 | 11:20 AM

Share

ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ AKSSA ಸಂಘಟನೆ ಹೋರಾಟಕ್ಕೆ ಕರೆ ನೀಡಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಕಳೆದ ವರ್ಷದ ದೊಡ್ಡ ಹೋರಾಟದ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಸಂಘಟನೆ ಅಧ್ಯಕ್ಷ ಕಾಂತ ಕುಮಾರ್ ಅವರ ಸುಳಿವು ಇಲ್ಲದಿದ್ದರೂ, ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ಮುಂದುವರಿಸಿದ್ದಾರೆ.

ಧಾರವಾಡ, ಆಗಸ್ಟ್ 18: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಸ್ಟೂಡೆಂಟ್ಸ್ ಅಸೋಸಿಯೇಷನ್ (AKSSA) ಸಂಘಟನೆ ಧಾರವಾಡದಲ್ಲಿ ಹೋರಾಟಕ್ಕೆ ಕರೆ ನೀಡಿದ್ದು, ನಗರದಲ್ಲಿ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಧಾರವಾಡದ ಶ್ರೀನಗರ ವೃತ್ತ ಸೇರಿದಂತೆ ಪ್ರಮುಖ ಜಂಕ್ಷನ್‌ಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯಲ್ಲಿ 8 ರಿಂದ 10 ಸಾವಿರ ಆಕಾಂಕ್ಷಿಗಳು ಸೇರಿ ಇಡೀ ನಗರವನ್ನು ಸ್ತಬ್ಧಗೊಳಿಸಿದ್ದರು. ಸಾರ್ವಜನಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ, ನಂತರದ ಹೋರಾಟಗಳಿಗೆ ಹೈಕೋರ್ಟ್ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಕೇವಲ 100 ಜನರಿಗೆ ಮಾತ್ರ ಅವಕಾಶ ನೀಡಿತ್ತು. ಆದರೂ, AKSSA ಸಂಘಟನೆಯು ಹೋರಾಟ ಮುಂದುವರಿಸಲು ನಿರ್ಧರಿಸಿದೆ.

ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ, ಸಂಘಟನೆ ಅಧ್ಯಕ್ಷ ಕಾಂತ ಕುಮಾರ್ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು. ಆದರೆ, ಅವರ ಸುಳಿವು ಇದುವರೆಗೂ ಲಭ್ಯವಾಗಿಲ್ಲ. 2.84 ಲಕ್ಷ ಹುದ್ದೆಗಳು ಖಾಲಿ ಇದ್ದರೂ, ಕೇವಲ 5-10% ಮಾತ್ರ ಭರ್ತಿ ಮಾಡಲಾಗುತ್ತಿದೆ ಎಂದು ಸಂಘಟನೆ ಆರೋಪಿಸಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರು ನಗರದ ಪ್ರವೇಶ ದ್ವಾರಗಳಲ್ಲಿ ವಾಹನ ತಪಾಸಣೆ ಮತ್ತು ಮಾರ್ಗ ಬದಲಾವಣೆಗಳನ್ನು ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More