ಕಳಪೆ ರಸ್ತೆ ಕಾಮಗಾರಿ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ

ಕಳಪೆ ರಸ್ತೆ ಕಾಮಗಾರಿ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 15, 2022 | 1:27 PM

ಅಧಿಕಾರಿಗಳು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರಾದರೂ ಅವರ ಯಾವುದೇ ಮಾತನ್ನು ಕಿವಿಗೆ ಹಾಕಿಕೊಳ್ಳದ ಶಾಸಕರು ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು.

ಧಾರವಾಡ: ಯಾದವಾಡ-ನರೇಂದ್ರ ನಡುವಿನ ರಸ್ತೆ ಕಾಮಗಾರಿ (road works) ಕಳಪೆ ಮಟ್ಟದ್ದಾಗಿದೆ ಎಂದು ಆ ಭಾಗದ ರೈತರು (farmers) ದೂರಿದ ಬಳಿಕ ಪರಿಶೀಲನೆಗೆ ತೆರಳಿದ ಧಾರವಾಡ ಗ್ರಾಮೀಣ ಶಾಸಕ ಅಮೃತ್ ದೇಸಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರಾದರೂ ಅವರ ಯಾವುದೇ ಮಾತನ್ನು ಕಿವಿಗೆ ಹಾಕಿಕೊಳ್ಳದ ಶಾಸಕರು ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ತಾಕೀತು ಮಾಡಿದರು.