ಧಾರವಾಡ: ಹಾವು-ಮುಂಗುಸಿ ಫೈಟ್; ಮೊಬೈಲ್ ಕ್ಯಾಮೆರಾದಲ್ಲಿ ಸೆರೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 03, 2023 | 10:03 PM

ನಾಗರಹಾವು ಮತ್ತು ಮುಂಗುಸಿ ಸೆಣೆಸಾಟ ನಡೆಸಿದ್ದು, ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಗರಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬಂದಿದ್ದ ನಾಗರಹಾವು ಗಿಡಗಂಟಿಗಳ ಮಧ್ಯೆ ಹೊರಟಿತ್ತು. ಈ ವೇಳೆ ಎದುರಿಗೆ ಬಂದ ಮುಂಗುಸಿ ಅದನ್ನು ತಡೆದು, ಬರೊಬ್ಬರಿ ಎರಡೂ ಗಂಟೆಗಳ ಕಾಲ ಕಾದಾಡಿವೆ.

ಧಾರವಾಡ, ಡಿ.03: ನಾಗರಹಾವು ಮತ್ತು ಮುಂಗುಸಿ ಸೆಣೆಸಾಟ(Snake and mongoose fight)ನಡೆಸಿದ್ದು, ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾದ ಘಟನೆ ಧಾರವಾಡ(Dharwad) ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಗರಗ(Garaga) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬಂದಿದ್ದ ನಾಗರಹಾವು ಗಿಡಗಂಟಿಗಳ ಮಧ್ಯೆ ಹೊರಟಿತ್ತು. ಈ ವೇಳೆ ಎದುರಿಗೆ ಬಂದ ಮುಂಗುಸಿ ಅದನ್ನು ತಡೆದು, ಬರೊಬ್ಬರಿ ಎರಡೂ ಗಂಟೆಗಳ ಕಾಲ ಕಾದಾಡಿವೆ. ಕೊನೆಗೆ ಗಿಡಗಳ ಮಧ್ಯೆ ನುಸುಳಿ ಕೊನೆಗೂ ಹಾವು ತಪ್ಪಿಸಿಕೊಂಡು ಹೋಯಿತು. ಈ ಹಾವು-ಮುಂಗುಸಿ ಕಾದಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More