ಕರ್ನಾಟಕದಲ್ಲಿ ಕನ್ನಡದಲ್ಲೇ ಮಾತನಾಡಬೇಕು, ಕನ್ನಡದಲ್ಲೇ ವ್ಯವಹರಿಸಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಧಾರವಾಡದ ಕೃಷಿ ವಿವಿ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಪದವಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಡಿದ ಭಾಷಣದ ವೇಳೆ, ಕರ್ನಾಟಕದಲ್ಲಿ ಕನ್ನಡದಲ್ಲೇ ಮಾತನಾಡಬೇಕು ಮತ್ತು ವ್ಯವಹರಿಸಬೇಕು ಎಂದು ಹೇಳಿದರು.
ಧಾರವಾಡ: ಕರ್ನಾಟಕದಲ್ಲಿ ಕಾರ್ಯಕ್ರಮ ನಡೆಸುವಾಗ ಕನ್ನಡ ಅಥವಾ ಹಿಂದಿಯಲ್ಲಿ ನಡೆಸಬೇಕು. ಹಿಂದಿ ಭಾಷೆ ಬಗ್ಗೆ ಮಾತನಾಡಿದಾಗ ರಾಜ್ಯದಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತದೆ ಎಂದು ಆರೋಪಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಯಾವುದೇ ಹಿಂದಿ ಭಾಷೆಯನ್ನು ಹೇರಲಾಗುತ್ತಿಲ್ಲ, ಇಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಪ್ರತಿಯೊಬ್ಬರೂ ಕನ್ನಡದಲ್ಲೇ ಮಾತನಾಡಬೇಕು ಮತ್ತು ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು. ಧಾರವಾಡದ ಕೃಷಿ ವಿವಿ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಭಾಷೆಗೂ ಒಂದು ಯೋಚನೆ ಇದೆ. ನಾವು ಮುಂದೆ ಏನು ಹೇಳಬೇಕು ಎಂಬುದನ್ನು ಯಾವ ಭಾಷೆಯಲ್ಲಿ ಯೋಚಿಸುತ್ತೆವೆಯೋ ಆ ಭಾಷೆಯಲ್ಲೇ ಮಾತನಾಡಿದಾಗ ಪರಸ್ಪರ ಸಂವಹನವು ಸರಿಯಾಗಿ ನಡೆಯುತ್ತದೆ ಎಂದರು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 10, 2022 02:53 PM
Latest Videos