ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ

Edited By:

Updated on: Feb 24, 2026 | 12:06 PM

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ನೇಮಕಾತಿ ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರವು ದಿವಾಳಿಯಾಗಿದೆ, ಸಂಬಳಕ್ಕೂ ಹಣವಿಲ್ಲ ಎಂದ ಅವರು ತಕ್ಷಣ ನೇಮಕಾತಿ ನಡೆಸದಿದ್ದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಧಾರವಾಡ, ಫೆಬ್ರವರಿ 24: ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ಒಬ್ಬ ನಿರುದ್ಯೋಗಿಗೂ ಉದ್ಯೋಗ ನೀಡಿಲ್ಲ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಮತ್ತು ಸಂಬಳ ನೀಡಲು ಸಹ ಹಣವಿಲ್ಲ. ರಾಜ್ಯದಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಹಣಕಾಸು ಇಲಾಖೆ 65,000 ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ನೀಡಿ ಆರು ತಿಂಗಳಾದರೂ ಒಂದು ಸಂದರ್ಶನ ಸಹ ಕರೆದಿಲ್ಲ. ತಕ್ಷಣವೇ ನೇಮಕಾತಿ ಪ್ರಕ್ರಿಯೆಗಳನ್ನು ಆರಂಭಿಸದಿದ್ದರೆ ರಾಜ್ಯವ್ಯಾಪಿ ಹೋರಾಟವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More