ಧಾರವಾಡ: ಭೂ ದಾಖಲೆ ಸರಿಪಡಿಸಲು ₹1 ಕೋಟಿ ಲಂಚ ಕೇಳಿ, ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

Edited By:

Updated on: Sep 17, 2026 | 6:26 AM

ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ₹50 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಭೂಮಿಯ ಖರಾಬು ತೆಗೆಯಲು ಮುಧೋಳ ಮೂಲದ ಪರಮೇಶ್ವರ ಅಂಗಡಿ ಅವರಿಂದ ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಮೊದಲ ಕಂತಾಗಿ ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.

ಧಾರವಾಡ, ಸೆಪ್ಟೆಂಬರ್ 17: ಧಾರವಾಡದ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಭೂಮಿಯ ಖರಾಬು ತೆಗೆಯಲು, ಅಂದರೆ ಆ ದಾಖಲೆಯನ್ನು ಸರಿಪಡಿಸಲು, ಅವರು ಮುಧೋಳ ಮೂಲದ ಪರಮೇಶ್ವರ ಅಂಗಡಿ ಎಂಬವರಿಂದ ₹1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಮೊದಲ ಕಂತಿನ ರೂಪದಲ್ಲಿ ₹50 ಲಕ್ಷ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ತಹಶೀಲ್ದಾರ್ ಹಣ ಪಡೆಯುವ ಸಂದರ್ಭದಲ್ಲಿಯೇ ದಾಳಿ ನಡೆಸಿದ್ದಾರೆ. ಲಂಚದ ಹಣದ ಸಮೇತ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ಮಟ್ಟಕ್ಕೆ ಬೇರೂರಿದೆ ಎಂಬುದಕ್ಕೆ ಈ ಘಟನೆ ಮತ್ತೊಂದು ಉದಾಹರಣೆಯಾಗಿದೆ. ಭೂ ಸಂಬಂಧಿತ ದಾಖಲೆಗಳ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಲೋಕಾಯುಕ್ತ ಅಧಿಕಾರಿಗಳು ಸಚ್ಚಿದಾನಂದ ಕುಚನೂರ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More