Loading video

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

| Updated By: ವಿವೇಕ ಬಿರಾದಾರ

Updated on: Apr 01, 2025 | 5:00 PM

ಧಾರವಾಡ ತಾಲೂಕಿನ ಹೊಲ್ತಿಕೋಟಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಬೇಸತ್ತ ಮಹಿಳೆಯರು, ಅಂಗಡಿಗಳ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ನಾಲ್ಕೈದು ಅಂಗಡಿಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿವೆ ಎಂದು ಆರೋಪಿಸಿ, ಅಬಕಾರಿ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಮದ್ಯದಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಧಾರವಾಡ ತಾಲೂಕಿನ ಹೊಲ್ತಿಕೋಟಿ ಗ್ರಾಮದಲ್ಲಿ‌ ಮಹಿಳೆಯರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದಾರೆ. ನಾಲ್ಕೈದು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಮದ್ಯ ಸೇವಿಸಿದ ಬಳಿಕ ಎಣ್ಣೆ ಪ್ರಿಯರು ಗ್ರಾಮದ ಬೀದಿಗಳಲ್ಲಿ, ನೀರಿನ ಟ್ಯಾಂಕ್​ಗಳ ಬಳಿ, ಶಾಲಾ ಆವರಣದಲ್ಲಿ, ದೇವಸ್ಥಾನಗಳ ಎದುರು ಪ್ಯಾಕೆಟ್​ಗಳನ್ನು ಎಸೆದು ಹೋಗುತ್ತಿದ್ದಾರೆ. ನಿತ್ಯವೂ ರಾಶಿ ರಾಶಿ ಪ್ಯಾಕೆಟ್ ತೆಗೆದು ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ. ಈ ಹಿನ್ನೆಲೆ‌ಯಲ್ಲಿ ಆಕ್ರೋಶಗೊಂಡ ಮಹಿಳೆಯರು ಸ್ವತಃ ಮದ್ಯ ಮಾರುವ ಅಂಗಡಿಗಳಿಗೆ ಮುತ್ತಿಗೆ ಹಾಕಿದ್ದಾರೆ. ಅಂಗಡಿಕಾರರಿಗೆ ಎಚ್ಚರಿಕೆ ನೀಡಿದ್ದಾರೆ. ಅಬಕಾರಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published on: Apr 01, 2025 04:59 PM