ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಕೋರ್ಟ್ ತೀರ್ಪಿನ ಬಳಿಕ ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ

Edited By:

Updated on: Apr 15, 2026 | 8:06 PM

ಕೋರ್ಟ್ ತೀರ್ಪಿನ ಬಳಿಕ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಪ್ರತಿಕ್ರಿಯಿಸಿದ್ದು, ಇದು ನ್ಯಾಯಕ್ಕೆ ಸಿಕ್ಕ ಜಯ. ನ್ಯಾಯಾಂಗ ಮೇಲೆ ವಿಶ್ವಾಸ ಹೆಚ್ಚಾಗಿದೆ. ಈ ತೀರ್ಪಿನಿಂದ ನ್ಯಾಯಾಂಗದ ಮೇಲೆ ವಿಶ್ವಾಸ ಬರುವಂತಾಗಿದೆ. ರಾಜಕಾರಣಿಗಳ ಮಾತು ಕೇಳದಂತೆ ಯುವಕರಿಗೆ ವಿನಂತಿಸಿಕೊಳ್ಳುವೆ. ನನಗೆ, ನನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ನನಗೆ ಪಾಪಪ್ರಜ್ಞೆ ಕಾಡುತ್ತಿತ್ತು. ಅದಕ್ಕೆ ಬಂದು ಸಾಕ್ಷಿ ನುಡಿದಿದ್ದೇನೆ. ನಾವು ದಾರಿ ತಪ್ಪಿದಾಗ ಕುಟುಂಬವೂ ದೂರವಾಗುತ್ತದೆ. ನಾವು ಮಾದರಿಯಾಗಿ ಜೀವನ ಮಾಡಬೇಕಾಗಿದೆ. ಕೆಲವು ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಆಗಲ್ಲ ಎಂದಿದ್ದಾರೆ.

ಧಾರವಾಡ, (ಏಪ್ರಿಲ್ 15): ಯೋಗೇಶ್ ಗೌಡ ಹತ್ಯೆ ಪ್ರಕರಣದ (Yogesh Gowda Murder Case) ಸುದೀರ್ಘ 10 ವರ್ಷಗಳ ಕಾಲ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಿದ್ದು, ಒಟ್ಟು ಆರೋಪಿಗಳ ಪೈಕಿ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿ ಆದೇಶ ಹೊರಡಿಸಿದೆ. ಉಳಿದ ಆರೋಪಿಗಳಲ್ಲಿ ಇಬ್ಬರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಲಾಗಿದ್ದು, ಇನ್ನಿಬ್ಬರನ್ನು ಮಾಫಿ ಸಾಕ್ಷಿಗಳೆಂದು ಪರಿಗಣಿಸಲಾಗಿದೆ. ಇನ್ನು ಕೋರ್ಟ್ ತೀರ್ಪಿನ ಬಳಿಕ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಪ್ರತಿಕ್ರಿಯಿಸಿದ್ದು, ಇದು ನ್ಯಾಯಕ್ಕೆ ಸಿಕ್ಕ ಜಯ. ನ್ಯಾಯಾಂಗ ಮೇಲೆ ವಿಶ್ವಾಸ ಹೆಚ್ಚಾಗಿದೆ. ಈ ತೀರ್ಪಿನಿಂದ ನ್ಯಾಯಾಂಗದ ಮೇಲೆ ವಿಶ್ವಾಸ ಬರುವಂತಾಗಿದೆ. ರಾಜಕಾರಣಿಗಳ ಮಾತು ಕೇಳದಂತೆ ಯುವಕರಿಗೆ ವಿನಂತಿಸಿಕೊಳ್ಳುವೆ. ನನಗೆ, ನನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ನನಗೆ ಪಾಪಪ್ರಜ್ಞೆ ಕಾಡುತ್ತಿತ್ತು. ಅದಕ್ಕೆ ಬಂದು ಸಾಕ್ಷಿ ನುಡಿದಿದ್ದೇನೆ. ನಾವು ದಾರಿ ತಪ್ಪಿದಾಗ ಕುಟುಂಬವೂ ದೂರವಾಗುತ್ತದೆ. ನಾವು ಮಾದರಿಯಾಗಿ ಜೀವನ ಮಾಡಬೇಕಾಗಿದೆ. ಕೆಲವು ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಕೇಸ್: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ದೋಷಿ, ಕೋರ್ಟ್ ಮಹತ್ವದ ತೀರ್ಪು

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More