ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು! ಸಂಬಂಧಿಕರು ಹೇಳಿದ್ದೇನು ನೋಡಿ

Edited By:

Updated on: Apr 11, 2026 | 11:37 AM

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ಅವರ ಆತ್ಮೀಯರು ಮೊಹಮ್ಮದ್ ಶಾ ಎಂಬ ವ್ಯಕ್ತಿ ಮತ್ತು ಇತರ ನಾಲ್ವರನ್ನು ಹೆಸರಿಸಿದ್ದಾರೆ. ರಾಜಕೀಯ ಹಾಗೂ ಹೊಲದ ವಿಷಯಕ್ಕೆ ಸಂಬಂಧಿಸಿದ ದ್ವೇಷವೇ ಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಶಂಕಿಸಿದ್ದಾರೆ. ಫೈರೋಜ್‌ರ ವಿವಾಹ ನಿಶ್ಚಿತವಾಗಿತ್ತು ಎಂದು ಆಪ್ತರು ತಿಳಿಸಿದ್ದಾರೆ.

ಧಾರವಾಡ, ಏಪ್ರಿಲ್ 11: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರನ್ನು ಧಾರವಾಡದ ಹಾಶ್ಮಿ ನಗರದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಇನ್ನೇನು 15 ದಿನಗಳಲ್ಲಿ ಅವರ ಮದುವೆಯೂ ನಿಗದಿಯಾಗಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಫೈರೋಜ್ ಪಠಾಣ್ ಆಪ್ತರೊಬ್ಬರು ‘ಟಿವಿ9’ ಜತೆ ಮಾತನಾಡಿದ್ದು, ಘಟನೆ ವೇಳೆ ಮನೆಗೆ ನುಗ್ಗಿದ್ದವರಲ್ಲಿ ಮೊಹಮ್ಮದ್ ಶಾ ಎಂಬಾತ ಇದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಕಾಣಿಸಿಕೊಂಡಿದ್ದಾನೆ. ಆತನೊಂದಿಗೆ ಇನ್ನೂ ನಾಲ್ವರು ಇದ್ದರು ಎಂದು ಆಪ್ತರು ತಿಳಿಸಿದ್ದಾರೆ. ಫೈರೋಜ್ ಮತ್ತು ಮೊಹಮ್ಮದ್ ಶಾ ನಡುವೆ ಮೊದಲಿನಿಂದಲೂ ಜಗಳವಿತ್ತು. ರಾಜಕೀಯ ಮುಖಂಡರ ಕೈವಾಡವೂ ಇದೆ ಎಂದು ಆರೋಪಿಸಲಾಗಿದೆ.

ರಾತ್ರಿ ಮನೆಗೆ ಬಂದಿದ್ದ ಆರೋಪಿಗಳು, ಫೈರೋಜ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಕುಟುಂಬದ ಸದಸ್ಯರಾದ ತಂಗಿ ಮತ್ತು ತಾಯಿಗೂ ಹಲ್ಲೆ ನಡೆಸಲಾಗಿದೆ. ಇದೀಗ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ವೈಯಕ್ತಿಕ ಹಾಗೂ ರಾಜಕೀಯ ಉದ್ದೇಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ. ಮದುವೆ ನಿಶ್ಚಿತವಾಗಿದ್ದ ಫೈರೋಜ್ ಹತ್ಯೆಯಿಂದ ಧಾರವಾಡ ಬೆಚ್ಚಿಬಿದ್ದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More