ಧ್ರುವ ಸರ್ಜಾ ಬರ್ತ್​ಡೇಗೆ ಬಂದ ಜನಸಾಗರ; ಎಲ್ಲರಿಗೂ ಸೆಲ್ಫಿ ಸಂಭ್ರಮ

Updated on: Oct 06, 2023 | 11:22 AM

ದೂರದ ಊರುಗಳಿಂದ ಬಂದ ಅಭಿಮಾನಿಗಳು ಧ್ರುವ ಸರ್ಜಾಗೆ ವಿಶ್​ ಮಾಡಿದ್ದಾರೆ. ನೆಚ್ಚಿನ ನಟನ ಜೊತೆ ಸೆಲ್ಫಿ ತೆಗೆದುಕೊಂಡು ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಕಳೆದ ಮೂರು ವರ್ಷಗಳಿಂದ ಧ್ರುವ ಜನ್ಮದಿನ ಆಚರಿಸಿಕೊಂಡಿರಲಿಲ್ಲ. ಹಾಗಾಗಿ ಈ ಬಾರಿ ಅವರ ಹುಟ್ಟುಹಬ್ಬ ಸಖತ್​ ಸ್ಪೆಷಲ್​ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ನಟ ಧ್ರುವ ಸರ್ಜಾ ಅವರು ಇಂದು (ಅಕ್ಟೋಬರ್​ 6) ಜನ್ಮದಿನ (Dhruva Sarja Birthday) ಆಚರಿಸಿಕೊಳ್ಳುತ್ತಿದ್ದಾರೆ. ಅ.5ರ ಮಧ್ಯರಾತ್ರಿಯಿಂದಲೇ ಸೆಲೆಬ್ರೇಷನ್​ ಶುರುವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಬಂದ ಅಭಿಮಾನಿಗಳು ಧ್ರುವ ಸರ್ಜಾಗೆ ಶುಭಾಶಯ ತಿಳಿಸಿದ್ದಾರೆ. ಹಾರ, ಕೇಕ್​ ಬದಲಿಗೆ ಬಡ ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಬುಕ್​, ಪೆನ್ನು, ಬ್ಯಾಗ್​ಗಳನ್ನು ಉಡುಗೊರೆ ರೂಪದಲ್ಲಿ ನೀಡುವಂತೆ ಅಭಿಮಾನಿಗಳಲ್ಲಿ ಧ್ರುವ ಮನವಿ ಮಾಡಿಕೊಂಡಿದ್ದರು. ಅದಕ್ಕೆ ತಕ್ಕಂತೆ ಅನೇಕ ಫ್ಯಾನ್ಸ್​ (Dhruva Sarja Fans) ನಡೆದುಕೊಂಡಿದ್ದಾರೆ. ತಮ್ಮನ್ನು ನೋಡಲು ಬಂದ ಅಭಿಮಾನಿಗಳ ಜೊತೆ ನಿಂತು ಧ್ರುವ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ನೆಚ್ಚಿನ ನಟನ ಜೊತೆ ಸೆಲ್ಫಿ ತೆಗೆದುಕೊಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇಂದು ಚಿರಂಜೀವಿ ಸರ್ಜಾ ನಟನೆಯ ‘ರಾಜಮಾರ್ತಾಂಡ’ ಸಿನಿಮಾ ಬಿಡುಗಡೆ ಆಗಿದೆ. ಆ ಖುಷಿ ಕೂಡ ಧ್ರುವ ಸರ್ಜಾ (Dhruva Sarja) ಅವರ ಅಭಿಮಾನಿಗಳಿಗೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More