‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ಕಾವೇರಿ ನಮ್ಮೆಲ್ಲರ ತಾಯಿ. ಅದು ಕರುನಾಡಿನ ಜೀವ ನದಿ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕು ಅಂತ ಕೇಳಿಕೊಳ್ಳುತ್ತೇನೆ. ನಮ್ಮ ಹಿರಿಯ ನಟರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಕನ್ನಡಿಗರಾಗಿ ನಾವೆಲ್ಲರೂ ಈ ಹೋರಾಟದಲ್ಲಿ ಇರುತ್ತೇವೆ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ ಹೋರಾಟದ ಕಿಚ್ಚು ಜೋರಾಗಿದೆ. ಕನ್ನಡ ಚಿತ್ರರಂಗ (Kannada Film Industry) ಕೂಡ ಈ ಹೋರಾಟದಲ್ಲಿ ಭಾಗಿ ಆಗಿದೆ. ಪ್ರಮುಖ ಕಲಾವಿದರು ರೈತರ ಬೆಂಬಲಕ್ಕೆ ನಿಂತಿದ್ದಾರೆ. ನಟ ಧ್ರುವ ಸರ್ಜಾ ಕೂಡ ಕಾವೇರಿ (Cauvery Water) ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಈ ಬಗ್ಗೆ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ. ‘ಕಾವೇರಿ ನಮ್ಮೆಲ್ಲರ ತಾಯಿ. ಅದು ಕರುನಾಡಿನ ಜೀವ ನದಿ. ಈ ಸಮಸ್ಯೆಯನ್ನು ಎಲ್ಲರೂ ಆದಷ್ಟು ಬೇಗ ಬಗೆಹರಿಸಬೇಕು ಅಂತ ಕೇಳಿಕೊಳ್ಳುತ್ತೇನೆ. ನಮ್ಮ ಹಿರಿಯ ನಟರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಒಬ್ಬ ರೈತನ ಮಗನಾಗಿ, ಕನ್ನಡಿಗರಾಗಿ ನಾವೆಲ್ಲರೂ ಈ ಹೋರಾಟದಲ್ಲಿ ಇರುತ್ತೇವೆ’ ಎಂದು ಧ್ರುವ ಸರ್ಜಾ (Dhruva Sarja) ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
