‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ

Updated on: Sep 25, 2023 | 4:33 PM

‘ಕಾವೇರಿ ನಮ್ಮೆಲ್ಲರ ತಾಯಿ. ಅದು ಕರುನಾಡಿನ ಜೀವ ನದಿ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕು ಅಂತ ಕೇಳಿಕೊಳ್ಳುತ್ತೇನೆ. ನಮ್ಮ ಹಿರಿಯ ನಟರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಕನ್ನಡಿಗರಾಗಿ ನಾವೆಲ್ಲರೂ ಈ ಹೋರಾಟದಲ್ಲಿ ಇರುತ್ತೇವೆ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ ಹೋರಾಟದ ಕಿಚ್ಚು ಜೋರಾಗಿದೆ. ಕನ್ನಡ ಚಿತ್ರರಂಗ (Kannada Film Industry) ಕೂಡ ಈ ಹೋರಾಟದಲ್ಲಿ ಭಾಗಿ ಆಗಿದೆ. ಪ್ರಮುಖ ಕಲಾವಿದರು ರೈತರ ಬೆಂಬಲಕ್ಕೆ ನಿಂತಿದ್ದಾರೆ. ನಟ ಧ್ರುವ ಸರ್ಜಾ ಕೂಡ ಕಾವೇರಿ (Cauvery Water) ಹೋರಾಟಕ್ಕೆ ಸಾಥ್​ ನೀಡಿದ್ದಾರೆ. ಈ ಬಗ್ಗೆ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ. ‘ಕಾವೇರಿ ನಮ್ಮೆಲ್ಲರ ತಾಯಿ. ಅದು ಕರುನಾಡಿನ ಜೀವ ನದಿ. ಈ ಸಮಸ್ಯೆಯನ್ನು ಎಲ್ಲರೂ ಆದಷ್ಟು ಬೇಗ ಬಗೆಹರಿಸಬೇಕು ಅಂತ ಕೇಳಿಕೊಳ್ಳುತ್ತೇನೆ. ನಮ್ಮ ಹಿರಿಯ ನಟರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಒಬ್ಬ ರೈತನ ಮಗನಾಗಿ, ಕನ್ನಡಿಗರಾಗಿ ನಾವೆಲ್ಲರೂ ಈ ಹೋರಾಟದಲ್ಲಿ ಇರುತ್ತೇವೆ’ ಎಂದು ಧ್ರುವ ಸರ್ಜಾ (Dhruva Sarja) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More